Rashmika Mandanna: ಕೂರ್ಗ್ ಲೇಡಿ ರಶ್ಮಿಕಾ ಮಂದಣ್ಣ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಚಲೋ ಚಿತ್ರದ ಮೂಲಕ ತೆಲುಗಿಗೆ ಪಾದಾರ್ಪಣೆ ಮಾಡಿದ ಅವರು ಸರಣಿ ಹಿಟ್ ಸಿನಿಮಾಗಳ ಮೂಲಕ ಹುಡುಗರ ಹೃದಯವನ್ನು ಕದ್ದಿದ್ದಾರೆ. 


COMMERCIAL BREAK
SCROLL TO CONTINUE READING

ಅನಿಮಲ್‌ ನಂತರ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ಪುಷ್ಪ 2 ಚಿತ್ರೀಕರಣ ಮುಗಿಸುತ್ತಿದ್ದಾರೆ.. ಈಗಾಗಲೇ ಒಂದು ಹಾಡಿನ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು..  ಸದ್ಯ ನಟಿ ಮತ್ತೊಂದು ಚಿತ್ರಕ್ಕೆ ಶಿಫ್ಟ್ ಆಗಲಿದ್ದಾರೆ ಎನ್ನಲಾಗುತ್ತಿದೆ..


ಇದನ್ನೂ ಓದಿ-ಸೋನು ಸೂದ್ ಡೀಪ್ ಫೇಕ್ ವಿಡಿಯೋ ವೈರಲ್‌..! ಫ್ಯಾನ್ಸ್‌ಗೆ ಎಚ್ಚರಿಕೆ ನೀಡಿದ ನಟ


ಇನ್ನು ರಶ್ಮಿಕಾ ಮಂದಣ್ಣ ಅವರ ಇತರ ಸಿನಿಮಾಗಳ ವಿಚಾರಕ್ಕೆ ಬಂದರೆ... ಇವರ ಇತ್ತೀಚಿನ ಸಿನಿಮಾವನ್ನು ನಿರ್ದೇಶಕ ರಾಹುಲ್ ರವೀಂದ್ರನ್ ನಿರ್ದೇಶನ ಮಾಡಿದ್ದು... ಜಿಎ2 ಪಿಕ್ಚರ್ಸ್ ನಿರ್ಮಿಸುತ್ತಿದೆ. ಇವುಗಳ ಜೊತೆಗೆ ಶೇಖರ್ ಕಮ್ಮುಲ ಮತ್ತು ಧನುಷ್ ಕಾಂಬಿನೇಷನ್ ನಲ್ಲಿ ಬರುತ್ತಿರುವ ಫ್ಯಾನ್ ಇಂಡಿಯಾ ಸಿನಿಮಾದಲ್ಲಿ ಈ ರಶ್ ನಾಯಕಿಯಾಗಿ ನಟಿಸಲಿದ್ದಾರೆ. 


ರಶ್ಮಿಕಾ ಈಗಾಗಲೇ ಅನಿಮಲ್, ಮಿಷನ್ ಮಜ್ನು, ಗುಡ್ ಬೈ ಮುಂತಾದ ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಛಾವಾ ಎಂಬ ಐತಿಹಾಸಿಕ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಅವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ... ಈ ಚಿತ್ರದಲ್ಲಿ ವಿಕ್ಕಿ ಕೌಶಲ್‌ಗೆ ನಾಯಕಿಯಾಗಿ ರಶ್ಮಿಕಾ ನಟಿಸಲಿದ್ದು.. ಚಿತ್ರವು ಛತ್ರಪತಿ ಶಿವಾಜಿಯ ಹಿರಿಯ ಮಗ ಛತ್ರಪತಿ ಶಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. 


ಇದನ್ನೂ ಓದಿ-ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥ ಫಿಕ್ಸ್..? ಮದುವೆ ಸುದ್ದಿಗೆ ಪ್ರತಿಕ್ರಿಯಿಸಿದ ವಿಜಯ್‌ ದೇವರಕೊಂಡ!


ಮತ್ತೊಂದೆಡೆ ರಶ್ಮಿಕಾ ಸೆನ್ಸೇಷನಲ್ ದಾಖಲೆ ಸೃಷ್ಟಿಸಿದ್ದಾರೆ. ರಶ್ಮಿಕಾ ಆಗಾಗ್ಗೆ ತಮ್ಮ ಚಲನಚಿತ್ರ ಮತ್ತು ವೈಯಕ್ತಿಕ ಮಾಹಿತಿಗಳನ್ನು ತಮ್ಮ ಅಭಿಮಾನಿಗಳು ಮತ್ತು ಪ್ರೇಕ್ಷಕರೊಂದಿಗೆ Instagram ನಲ್ಲಿ ಹಂಚಿಕೊಳ್ಳುತ್ತಾರೆ... ಇತ್ತೀಚೆಗೆ ರಶ್ಮಿಕಾ ಮಂದಣ್ಣ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಟ್ಟು 38 ಮಿಲಿಯನ್ ಫಾಲೋವರ್ಸ್‌ ಪಡೆಯುವ ಮೂಲಕ ಭಾರತದಲ್ಲಿ ಅತಿ ಹೆಚ್ಚು ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಾಯಕಿಯರಲ್ಲಿ ಒಬ್ಬರು ಎಂಬ ಸೆನ್ಸೇಷನಲ್ ದಾಖಲೆಯನ್ನು ಸೃಷ್ಟಿಸಿದ್ದಾರೆ..


ಸತತ ಹಿಟ್ ಚಿತ್ರಗಳ ಮೂಲಕ ಉತ್ತಮ ಫಾರ್ಮ್‌ನಲ್ಲಿರುವ ರಶ್ಮಿಕಾ ಮಂದಣ್ಣ ಅವರ ಸಂಭಾವನೆ ಒಂದು ಚಿತ್ರಕ್ಕೆ ರಶ್ಮಿಕಾ 4 ಕೋಟಿ.. ಇನ್ನು ರಶ್ಮಿಕಾ ಅವರ ಆಸ್ತಿ ಮೌಲ್ಯ 64 ಕೋಟಿ, ತಿಂಗಳ ವರಮಾನ 60 ಲಕ್ಷ, ವಾರ್ಷಿಕ ಆದಾಯ ಎಂಟು ಕೋಟಿ ಎಂದು ವರದಿಮಾಡಲಾಗಿದೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.