Rashmika Mandanna: ಹಿಜಾಬ್ ಧರಿಸಿ ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ..!
ಘೋಷಣೆಯಾಗಿರುವ ಹೊಸ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಹಿಜಾಬ್(Hijab) ಧರಿಸಿದ್ದು, ಕೈಯಲ್ಲಿ ಬ್ಯಾಗ್ ಹಿಡಿದುಕೊಂಡಿದ್ದಾರೆ.
ಬೆಂಗಳೂರು: ಕೊಡಗಿನ ಕುವರಿ, ನಟಿ ರಶ್ಮಿಕಾ ಮಂದಣ್ಣ(Rashmika Mandanna) ಅವರು ಬಣ್ಣದ ಲೋಕದಲ್ಲಿ ಸಖತ್ ಮಿಂಚುತ್ತಿದ್ದಾರೆ. ಬಾಲಿವುಡ್, ಕಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ. ತಮ್ಮ ಪ್ರತಿಯೊಂದು ಸಿನಿಮಾದಲ್ಲಿಯೂ ವಿಭಿನ್ನ ಪಾತ್ರಗಳ ಮೂಲಕ ರಶ್ಮಿಕಾ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ. ಅದ್ಭುತ ನಟನೆಯ ಮೂಲಕ ಸಿನಿಮಾ ಪ್ರೇಮಿಗಳಿಂದ ಭೇಷ್ ಎನಿಸಿಕೊಂಡಿರುವ ರಶ್ಮಿಕಾ ನಟನೆಯ ‘ಪುಷ್ಪ’ ಸಿನಿಮಾ ಬಾಕ್ಸಾ ಆಫೀಸ್ ಧೂಳಿಪಟ ಮಾಡಿದೆ.
ಏಪ್ರಿಲ್ 5 ಅಂದರೆ ಇಂದು ರಶ್ಮಿಕಾಗೆ ಹುಟ್ಟುಹಬ್ಬ(Rashmika Mandanna Birthday)ದ ಸಂಭ್ರಮ. 26ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ವಿಶೇಷವೆಂದರೆ ರಶ್ಮಿಕಾ ಬರ್ತ್ ಡೇ ದಿನವೇ ಅವರ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಈ ಸಿನಿಮಾದಲ್ಲಿ ಅವರು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.
ಇದನ್ನೂ ಓದಿ: Kiccha Sudeep: ನಟ ಸುದೀಪ್ ನೋಡಲು ಕಲಬುರಗಿಯಿಂದ ನಡೆದುಕೊಂಡೇ ಬಂದ ಅಭಿಮಾನಿಗಳು..!
Alia Bhatt:ಫೋನ್ ಮೂಲಕ ರಣಬೀರ್ ಕಪೂರ್‌ಗೆ ಆಲಿಯಾ ಭಟ್ ಆರ್ಡರ್ ಮಾಡಿದ್ದೇನು?
ಸದ್ಯ ಕರ್ನಾಟಕ ಸೇರಿದಂತೆ ದೇಶಾದ್ಯಂತ ಹಿಜಾಬ್ ವಿವಾದ(Hijab Row)ದ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಈ ಮಧ್ಯೆ ರಶ್ಮಿಕಾ ಅವರು ಕೆಂಪು ಹಿಜಾಬ್ ಧರಿಸಿ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಕಾರಣವಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.