Sandalwood : ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮುಂತಾದವರು ನಟಿಸಿದ್ದಾರೆ.  ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.


COMMERCIAL BREAK
SCROLL TO CONTINUE READING

ಈ ಚಿತ್ರಕ್ಕೆ ರಾಜು ಬೋನಗಾನಿ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ. ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯವಾಗಲು ಸಹಕರಿಸಿದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ರಾಜು ಬೋನಗಾನಿ ಧನ್ಯವಾದ ತಿಳಿಸಿದ್ದಾರೆ.  


ಇದನ್ನೂ ಓದಿ-Photo Gallery: ಹಾಡುಗಳ ಮೂಲಕ ಕಲಾರಸಿಕರ ಮನ ಗೆದ್ದ "ರೋಡ್ ಕಿಂಗ್"


ಸಾಮಾನ್ಯವಾಗಿ ರೇವ್ ಪಾರ್ಟಿಗಳು ಬೆಂಗಳೂರು, ಉಡುಪಿ ಮತ್ತು ಗೋವಾದಲ್ಲಿ ನಡೆಯುತ್ತವೆ. ಈ ಪಾರ್ಟಿಗಳು ಹೇಗೆ ನಡೆಯುತ್ತವೆ? ಅದರ ಹಿಂದೆ ಯಾರೆಲ್ಲಾ ಇರುತ್ತಾರೆ? ಈ ಪಾರ್ಟಿಗಳು ಯುವ ಜನತೆಯ ಮೇಲೆ ಏನೆಲ್ಲಾ ದುಷ್ಪರಿಣಾಮಗಳು ಬೀರುತ್ತವೆ ಎಂಬ ಅಂಶಗಳನ್ನು ಈ ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇವೆ. ‘ರೇವ್ ಪಾರ್ಟಿ’ ಚಿತ್ರವು ಇಂದಿನ ಯುವ ಜನತೆಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ನಿರ್ದೇಶಕ ರಾಜು ಬೋನಗಾನಿ. 


‘ರೇವ್ ಪಾರ್ಟಿ’ ಚಿತ್ರಕ್ಕೆ ದಿಲೀಪ್ ಭಂಡಾರಿ ಸಂಗೀತ ಸಂಯೋಜಿಸಿದ್ದು, ವೆಂಕಟ್ ಮನ್ನಂ ಛಾಯಾಗ್ರಹಣ ಮಾಡಿದ್ದಾರೆ. ರವಿಕುಮಾರ್ ಅವರ ಸಂಕಲನ, ವೆಂಕಟ್ ಆರೆ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ-ಅಭಿ-ಅವಿವಾ ಜೋಡಿಗೆ ಚಾಲೆಂಜಿಂಗ್‌ ಸ್ಟಾರ್‌ ಕೊಟ್ಟ ಗಿಫ್ಟ್‌ ಏನು ಗೊತ್ತಾ..?


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.