ಕಾಲ್ತುಳಿತಕ್ಕೆ ಹೊಣೆ ಯಾರು..? ನಟ ಅಲ್ಲು ಅರ್ಜುನ್‌ ನಂತೆ ಜೈಲು ಸೇರುವವರಾರು..? RCB ಕ್ರಿಕೆಟಿಗರು ಇಲ್ಲವೇ ಸಿಎಂ..?

RCB victory parade: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವಿನ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 27ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೀಗ ಈ ಸಾವಿಗೆ ಕಾರಣ ಯಾರು ಎನ್ನುವ ಕುರಿತು ಚರ್ಚೆ ಶುರುವಾಗಿದೆ.

Written by - Krishna N K | Last Updated : Jun 4, 2025, 08:20 PM IST
    • ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವಿನ ಸಂಭ್ರಮಾಚರಣೆ
    • ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಜನ ಸಾವು
    • ಈ ಸಾವಿಗೆ ಕಾರಣ ಯಾರು ಎನ್ನುವ ಕುರಿತು ಚರ್ಚೆ ಶುರುವಾಗಿದೆ
ಕಾಲ್ತುಳಿತಕ್ಕೆ ಹೊಣೆ ಯಾರು..? ನಟ ಅಲ್ಲು ಅರ್ಜುನ್‌ ನಂತೆ ಜೈಲು ಸೇರುವವರಾರು..? RCB ಕ್ರಿಕೆಟಿಗರು ಇಲ್ಲವೇ ಸಿಎಂ..?

RCB parade stampede : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB Celebration) ತಂಡದ ವಿಜಯೋತ್ಸವವನ್ನು ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Add Zee News as a Preferred Source

ಈ ಕಾಲ್ತುಳಿತ ಪ್ರಕರಣಕ್ಕೆ ಹೊಣೆ ಯಾರು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ನೆಟ್ಟಿಗರು ಈ ಪ್ರಕರಣವನ್ನು ಪುಷ್ಪಾ 2 ಸಿನಿಮಾದ ಬಿಡುಗಡೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಲಿಂಕ್‌ ಮಾಡುವ ಮೂಲಕ ಹಲವಾರು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. 

ಇದನ್ನೂ ಓದಿ:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ನಾಲ್ವರು RCB ಅಭಿಮಾನಿಗಳ ಸಾವು; 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಇಂದು ನಡೆದ ಕಾಲ್ತುಳಿತ.. ತೆಲುಗು ನಟ ಅಲ್ಲು ಅರ್ಜುನ್ ಪ್ರಕರಣ ನೆನಪಿಗೆ ಬರುತ್ತದೆ. ಡಿಸೆಂಬರ್ 2024 ರಲ್ಲಿ, ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ 'ಪುಷ್ಪ 2' ಚಿತ್ರದ ಪ್ರಥಮ ಪ್ರದರ್ಶನದ ಸಮಯದಲ್ಲಿ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದರು. ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯ ನಂತರ, ತೆಲಂಗಾಣ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಜನಸಂದಣಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡಿದ ಆರೋಪದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಹಾಗಿದ್ದಲ್ಲಿ, ಆರ್‌ಸಿಬಿ ಪೆರೇಡ್ ಸಮಯದಲ್ಲಿ ನಡೆದ ಕಾಲ್ತುಳಿತಕ್ಕೆ ಯಾರು ಹೊಣೆಗಾರರು..? ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ:RCB ಗೆಲುವಿನ ನಂತರ ಕೊಹ್ಲಿ ಅಪ್ಪಿಕೊಂಡ ಈ ವ್ಯಕ್ತಿ ಯಾರು ಗೊತ್ತೆ..? ವಿರಾಟ್‌ "ಕಿಂಗ್‌" ಆಗೋಕೆ.. ಈ ವ್ಯಕ್ತಿತ್ವವೇ ಕಾರಣ..

ಇದಕ್ಕಾಗಿ ಆರ್‌ಸಿಬಿ ಫ್ರಾಂಚೈಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ..? ಅಥವಾ ಪೊಲೀಸ್ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ..? ಕರ್ನಾಟಕದ ಸಿಎಂ ಈಗ ಜೈಲಿಗೆ ಏಕೆ ಹೋಗಬೇಕೇ..? ಏಂಬ ಪ್ರಶ್ನೆಯನ್ನು ನೆಟ್ಟಿಗರು ಸೋಷಿಯಲ್‌ ಮೀಡಿಯಾದಲ್ಲಿ ಕೇಳುತ್ತಿದ್ದಾರೆ. ಈ ಕುರಿತು ಸರ್ಕಾರ ಮತ್ತು ಆರ್‌ಸಿಬಿ ಮ್ಯಾನೆಜ್‌ಮೆಂಟ್‌ ಯಾವ ಉತ್ತರ ನೀಡುತ್ತೆ ಅಂತ ಕಾಯ್ದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News