Renuka Swamy Murder Case: ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ಪವಿತ್ರಾ ಗೌಡ..!
Renuka Swamy Murder Case: ದರ್ಶನ್ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿದ್ದು, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆಂದು ಆರೋಪಿಸಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡರನ್ನು 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್ ಅವರೇ ಕಾರಣ ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.
Renuka Swamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ದರ್ಶನ್, ಪವಿತ್ರಾ ಸೇರಿದಂತೆ ಎಲ್ಲಾ ಆರೋಪಿಗಳ 6 ದಿನದ ಪೊಲೀಸ್ ಕಸ್ಟಡಿ ಅಂತ್ಯವಾಗುತ್ತಿರುವ ಕಾರಣ ಒಂದು ದಿನ ಮುಂಚಿತವಾಗಿಯೇ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ವಿಚಾರಣೆಯ ನಂತರ ನ್ಯಾಯಾಧೀಶರು, ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ವೇಳೆ ಪವಿತ್ರಾಗೌಡ ಅವರು ನ್ಯಾಯಾಧೀಶರ ಮುಂದೆಯೇ ಕಣ್ಣೀರು ಹಾಕಿದ್ದಾರೆಂದು ತಿಳಿದುಬಂದಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಪವಿತ್ರಗೌಡ, A2 ದರ್ಶನ, A3 ಪವನ್, A4 ರಾಘವೇಂದ್ರ, A5 ನಂದೀಶ್, A6 ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, A8 ರವಿ ಅಲಿಯಾಸ್ ರವಿಶಂಕರ್, A9 ರಾಜು, A10 ವಿನಯ್, A11 ನಾಗರಾಜು ಅಲಿಯಾಸ್ ನಾಗ, A12 ಲಕ್ಷ್ಮಣ್, A13 ದೀಪಕ್, A14 ಪ್ರದೋಶ್, A15 ಕಾರ್ತಿಕ್ ಅಲಿಯಾಸ್ ಕಪ್ಪೆ, A16 ಕೇಶವ್ ಮೂರ್ತಿ & A17 ನಿಖಿಲ್ ಈ ಎಲ್ಲಾ ಆರೋಪಿಗಳು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ. ವಿಚಾರಣೆ ಬಾಕಿ ಹಿನ್ನೆಲೆ 5 ದಿನ ದರ್ಶನ್ ಅಂಡ್ ಗ್ಯಾಂಗ್ಅನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಜೂನ್ 20ರವೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ: "ಆ ಸೀನ್ಗಳನ್ನು ಮಾಡೋವಾಗ ತುಂಬಾ ನೋವಾಗುತ್ತೆ" ಇಂಟಿಮೇಟ್ ದೃಶ್ಯಗಳ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ ಖ್ಯಾತ ನಟಿ!!
ಈ ವೇಳೆ ದರ್ಶನ್ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿದ್ದು, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆಂದು ಆರೋಪಿಸಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡರನ್ನು 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್ ಅವರೇ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್ ಮೇಲೆ ಎಲ್ಲಾ ಅರೋಪ ಮಾಡುವುದು ಎಷ್ಟು ಸರಿ? ಪವಿತ್ರಾ ಗೌಡರ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಆರೋಪಿಗಳ ಹೇಳಿಕೆಗಳೂ ಸಹ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಅಂತಾ ಮನವಿ ಮಾಡಿಕೊಂಡರು.
ವಾದ ಮುಂದುವರಿಸಿದ SPP ಪ್ರಸನ್ನ ಕುಮಾರ್, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಬಳಸಿರುವ ಡಿವೈಸ್ಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಇದೇ ವೇಳೆ ಮನವಿ ಮಾಡಿದರು. ಈ ವೇಳೆ ಪವಿತ್ರಾಗೌಡ ಪರ ವಕೀಲ ನಾರಾಯಾಣಸ್ವಾಮಿ ಮಾತನಾಡಿ, ʼನನ್ನ ಕಕ್ಷಿದಾರರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕೊಟ್ಟಿಲ್ಲವೆಂದು ಅಸಮಾಧಾನ ಹೊರಹಾಕಿದರು. ವಾದ-ಪ್ರತಿವಾದ ಅಲಿಸಿದ ಬಳಿಕ ನ್ಯಾಯಾಧೀಶರು, ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ಸೂಚಿಸಿದರು.
ಇದನ್ನೂ ಓದಿ: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ "ಬಹದ್ದೂರ್"!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.