darshans bail cancelled: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳಾದ ದರ್ಶನ್, ಪ್ರವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಲಾಗಿದೆ.

Renukaswamy case: ಕನ್ನಡ ಚಿತ್ರರಂಗದ "ಚಾಲೆಂಜಿಂಗ್ ಸ್ಟಾರ್" ದರ್ಶನ್ ಅವರಿಗೆ ಮತ್ತೊಂದು ದೊಡ್ಡ ಕಾನೂನು ಆಪತ್ತು ಎದುರಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ 33 ವರ್ಷದ ರೇಣುಕಾಸ್ವಾಮಿಯ ಹ*ತ್ಯೆಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ನಟ ದರ್ಶನ್ಗೆ ಡಿಸೆಂಬರ್ 13, 2024 ರಂದು ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.
ಈ ಸಮಯದಲ್ಲಿ ತನಿಖಾ ಅಧಿಕಾರಿಗಳು ದರ್ಶನ್ ಮತ್ತು ಅವರ ಬಳಗದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದರು. ಪ್ರಕರಣದ ಗಂಭೀರತೆ, ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ, ತನಿಖೆಯಲ್ಲಿ ತೊಂದರೆ ಉಂಟಾಗುವ ಭೀತಿ ಇವುಗಳನ್ನು ಉಲ್ಲೇಖಿಸಿ ಅಭಿಯೋಜಕರು ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಈ ಅಂಶಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ತೀರ್ಪನ್ನು ತಿರಸ್ಕರಿಸಿ ಜಾಮೀನು ರದ್ದುಪಡಿಸಿದೆ.
ಈ ಬೆಳವಣಿಗೆಯಿಂದ ದರ್ಶನ್ ಮತ್ತೆ ಬಂಧನಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದ್ದು, ಪೊಲೀಸರು ಶೀಘ್ರದಲ್ಲೇ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಇದರೊಂದಿಗೆ ದರ್ಶನ್ ಅವರ ಭವಿಷ್ಯ ಹಾಗೂ ಚಿತ್ರರಂಗದಲ್ಲಿನ ಅವರ ಪ್ರಾಜೆಕ್ಟುಗಳ ಮೇಲೂ ಪರಿಣಾಮ ಬೀರಬಹುದು ಎನ್ನಲಾಗಿದೆ. ಪ್ರಕರಣದ ಈ ಹೊಸ ತಿರುವು ಈಗ ಮತ್ತೊಮ್ಮೆ ರಾಜ್ಯ ರಾಜಕೀಯ, ಮಾಧ್ಯಮ ಹಾಗೂ ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.