Renukaswamy Murder Case: ಆಸ್ಪತ್ರೆಯಲ್ಲಿ ನಟ ದರ್ಶನ್ ಧರಿಸಿದ್ದ ವಿಗ್ ತೆಗೆಸಿದ ಪೊಲೀಸರು!
Renukaswamy Murder Case: ನಟ ದರ್ಶನ್ ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ಅವರು ಧರಿಸಿದ್ದ ವಿಗ್‌ಅನ್ನು ತೆಗೆಸಿದ್ದಾರೆಂದು ವರದಿಯಾಗಿದೆ. ಪೊಲೀಸರು ಆರೋಪಿ ದರ್ಶನ್ ರಕ್ತ ಹಾಗೂ ಕೂದಲಿನ ಸ್ಯಾಂಪಲ್ ಪಡೆದುಕೊಂಡಿದ್ದಾರೆ.
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ ಸೇರಿದಂತೆ 18 ಆರೋಪಿಗಳು ಸದ್ಯ ಜೈಲು ಹಕ್ಕಿಗಳಾಗಿದ್ದಾರೆ. ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿರುವ ಆರೋಪಿಗಳನ್ನು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಪ್ರಕರಣ ಸಂಬಂಧ ಆರೋಪಿಗಳಿಗೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ತಪಾಸಣೆಗಾಗಿ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ನಟ ದರ್ಶನ್ ಅವರು ತಲೆಗೆ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆಸಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ: ದರ್ಶನ್ ಪತ್ನಿ ಇರುವ ಅಪಾರ್ಟ್ಮೆಂಟ್ ನಲ್ಲಿ ದಿನಕ್ಕೊಂದು ಸಮಸ್ಯೆ ಎದುರಾಗುತ್ತೆ : ಪ್ರಶಾಂತ ಸಂಬರಗಿ
ಪೊಲೀಸರ ಕಸ್ಟಡಿಯಲ್ಲಿರುವ ಎಲ್ಲಾ ಆರೋಪಿಗಳನ್ನು ನಾಳೆ ಅಂದರೆ ಗುರುವಾರ(ಜೂನ್ 20) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಈ ಹಿನ್ನೆಲೆ ಪ್ರಕರಣದ A-1 ಆರೋಪಿ ಪವಿತ್ರಾ ಗೌಡ, A-2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರೋಗ್ಯ ತಪಾಸಣೆಗೆ ಕರೆದುಕೊಂಡು ಹೋಗಲಾಗಿತ್ತು.
ಈ ವೇಳೆ ಉಳಿದ ಆರೋಪಿಗಳಂತೆ ನಟ ದರ್ಶನ್ ಕೂದಲಿನ ಮಾದರಿ ಸಂಗ್ರಹಿಸಲು ಪೊಲೀಸರು ಅವರು ಧರಿಸಿದ್ದ ವಿಗ್‌ಅನ್ನು ತೆಗೆಸಿದ್ದಾರೆಂದು ವರದಿಯಾಗಿದೆ. ಪೊಲೀಸರು ಆರೋಪಿ ದರ್ಶನ್ ರಕ್ತ ಹಾಗೂ ಕೂದಲಿನ ಸ್ಯಾಂಪಲ್ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!
ಪ್ರಕರಣ ಸಂಬಂಧ ಆರೋಪಿಗಳ DNA ಪರೀಕ್ಷೆಗೆ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ದಿನದಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಎಲ್ಲಾ ಆಯಾಮದಲ್ಲಿಯೂ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.