RIP Puneeth Rajkumar: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು
RIP Puneeth Rajkumar : ಕನ್ನಡ ಚಿತ್ರರಂಗದ ಯುವರತ್ನ ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
RIP Puneeth Rajkumar - ಕನ್ನಡ ಚಿತ್ರರಂಗದ ಅಪ್ಪು, ಯುವರತ್ನ ಪುನೀತ್ ರಾಜ್ ಕುಮಾರ್ ಹೃದಯಾಘಾತದ ಕಾರಣ ನಮ್ಮನ್ನು ಅಗಲಿದ್ದಾರೆ. ಬೆಳಗ್ಗೆ ಜಿಮ್ಮಾಡುವಾಗ ಹೃದಯ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ (Vikram Hospital) ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ದಾಖಲಾದ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ ಹಿನ್ನೆಲೆ ಮತ್ತು ಚಿಕಿತ್ಸೆ ಫಲಕಾರಿಯಾಗದೆ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ.
Puneeth Rest In Peace - ತನ್ನ ವಯಸ್ಸಿನ ಕೇವಲ 46ನೇ ವಯಸ್ಸಿನಲ್ಲಿ ಪುನೀತ್ ರಾಜ್ ಕುಮಾರ್ (Puneeth Rajkumar) ಪ್ರಪಂಚಕ್ಕೆ ವಿದಾಯ ಹೇಳಿದ್ದಾರೆ. ಪುನೀತ್ ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾ ಜಗತ್ತಿನ ಗಣ್ಯರು, ರಾಜಕೀಯ ಗಣ್ಯರು ಸೇರಿದಂತೆ ಹಲವರು ತಮ್ಮ ಸಂತಾಪ ಸೂಚಿಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 'ವಿಧಿಯ ಕ್ರೂರ ತಿರುವು ಪುನೀತ್ ರಾಜ್‌ಕುಮಾರ್ ಎಂಬ ಸಮೃದ್ಧ ಮತ್ತು ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ. ಇದು ಅಗಲುವ ವಯಸ್ಸಲ್ಲ. ಮುಂಬರುವ ಪೀಳಿಗೆಗಳು ಅವರ ಕೆಲಸ ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳ ಲಿವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.' ಎಂದು ಪ್ರಧಾನಿ ಹೇಳಿದ್ದಾರೆ .
Breaking News: ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ
ಪುನೀತ್ ನಿಧನಕ್ಕೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, " ಪುನೀತ್ ರಾಜ್ ಕುಮಾರ್ ಅವರಂತಹ ಪ್ರತಿಭಾವಂತ ನಟನ ಅಗಲಿಕೆ ಅಪಾರ ನೋವು ತಂದಿದೆ. ಅವರು ತಮ್ಮ ಉತ್ತಮ ನಟನಾ ಕೌಶಲ್ಯ ಮತ್ತು ತಮ್ಮ ಸರಳತೆಯ ಮೂಲಕ ಕನ್ನಡಿಗರ ಹೃದಯವನ್ನು ಗೆದ್ದಿದ್ದರು. ಅವರ ಅಗಲಿಕೆ ಕರ್ನಾಟಕಕ್ಕೆ ತುಂಬಲಾರದ ನಷ್ಟ' ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಮತ್ತೊಂದು ಟ್ವೀಟ್ ನಲ್ಲಿ ಬರೆದುಕೊಂಡಿರುವ ಸಿದ್ಧಮಯ್ಯ ಅವರು, 'ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜ್ ಕುಮಾರ್ ಹಟಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲ್ಯದ ಜೊತೆ ಸರಳ ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮನೆ ಮಗನಂತಿದ್ದ. ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೋಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಹಾಗೂ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ' ಎಂದು ಹೇಳಿದ್ದಾರೆ.
‘ಬೆಟ್ಟದ ಹೂ’ ಮೂಲಕ ಬಾಲ್ಯದಲ್ಲಿಯೇ ಮೋಡಿ ಮಾಡಿದ್ದ ಪುನೀತ್ ರಾಜ್ ಕುಮಾರ್
ಪುನೀತ್ ಸಾವಿನ ಹಿನ್ನೆಲೆ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು 'ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.
ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ- ಮಾಜಿ ಪ್ರಧಾನಿ ದೇವೇಗೌಡರ ಸಂತಾಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ