ಮಾರ್ಚ್ 17 ರಂದು ಸ್ವಿಜರ್ಲ್ಯಾಂಡ್‌ನಲ್ಲಿ ʼಕಾಂತಾರʼ ಸಿನಿಮಾ ಪ್ರದರ್ಶನ..!

ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ ʼಕಾಂತಾರʼ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್‌ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ.

Written by - YASHODHA POOJARI | Edited by - Krishna N K | Last Updated : Mar 16, 2023, 07:27 PM IST
  • ʼಕಾಂತಾರʼ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ.
  • ಇದೀಗ ಮಾರ್ಚ್ 17 ರ ಸಂಜೆ ಜಿನಿವಾದಲ್ಲಿ ಕಾಂತಾರ ಪ್ರದರ್ಶನವಾಗಲಿದೆ.
  • ಪ್ರದರ್ಶನದ ನಂತರ ರಿಷಭ್ ಶೆಟ್ಟಿ ʼಕಾಂತಾರʼ ಚಿತ್ರದ ಕುರಿತು ಮಾತನಾಡಲಿದ್ದಾರೆ.
ಮಾರ್ಚ್ 17 ರಂದು ಸ್ವಿಜರ್ಲ್ಯಾಂಡ್‌ನಲ್ಲಿ ʼಕಾಂತಾರʼ ಸಿನಿಮಾ ಪ್ರದರ್ಶನ..! title=

Kantara Movie : ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದಶಿಸಿರುವ ʼಕಾಂತಾರʼ ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್‌ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಭ್ ಶೆಟ್ಟಿ ಅವರು ಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ.

ಮಾರ್ಚ್ 17 ರ ಸಂಜೆ ಜಿನಿವಾದ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ʼಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್ʼ ನಲ್ಲಿ ʼಕಾಂತಾರʼ ಚಿತ್ರ ಪ್ರದರ್ಶನವಾಗಲಿದೆ. ʼಕಾನ್ಸುಲೇಟ್ ಜನರಲ್ ಆಫ್ ಇಂಡಿಯಾʼ ʼಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ʼ ಹಾಗೂ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳು (ಜಿನಿವಾ) ಆಯೋಜಿಸಿರುವ ಈ ಪ್ರದರ್ಶನದಲ್ಲಿ ರಿಷಭ್ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರದರ್ಶನದ ನಂತರ ರಿಷಭ್ ಶೆಟ್ಟಿ, ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಹಾಗೂ ʼಕಾಂತಾರʼ ಚಿತ್ರದ ಕುರಿತು ಮಾತನಾಡಲಿದ್ದಾರೆ. 

ಇದನ್ನೂ ಓದಿ: Nani : ʼಕೆಜಿಎಫ್‌ʼ ಬಗ್ಗೆ ಹಾಸ್ಯ ಮಾಡಿದ್ದ ನಿರ್ದೇಶಕನಿಗೆ ಚಳಿ ಬಿಡಿಸಿದ ನಟ ʼನಾನಿʼ..!

ಕನ್ನಡದ ಚಿತ್ರವೊಂದು ವಿಶ್ವದಾದ್ಯಂತ ಈ ರೀತಿ ಮೆಚ್ಚುಗೆಗೆ ಪಾತ್ರವಾಗುತ್ತಿರುವುದು ನಿಜಕ್ಕೂ ಹೆಮ್ಮೆ. ರಿಷಭ್ ಶೆಟ್ಟಿ ಮೊದಲಿನಿಂದಲೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಈ ಚಿತ್ರವನ್ನು ಅರ್ಪಿಸಿರುವುದಾಗಿ ಹೇಳುತ್ತಾ ಬರುತ್ತಿದ್ದಾರೆ. ಮಾರ್ಚ್ 17 ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಅದೇ ದಿನ ಈ ಪ್ರದರ್ಶನ ಆಯೋಜನೆಯಾಗಿರುವುದು ವಿಶೇಷ. ಅವರ ಹುಟ್ಟುಹಬ್ಬದ ದಿನ ಪ್ರದರ್ಶನವಾಗಲಿರುವ ಈ ಪ್ರದರ್ಶನವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುವುದಾಗಿ ರಿಷಭ್ ಶೆಟ್ಟಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News