Rishab Shetty : ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಇಂದು ವಿಶ್ವಸಂಸ್ಥೆಯಲ್ಲಿ ದೇಶವನ್ನು ಪ್ರತಿನಿಧಿಸಿ ಮಾತನಾಡಿದ್ದಾರೆ. ಈ ವೇಳೆ ತಮ್ಮ ಸಿನಿಮಾ ʼಕಾಂತಾರʼ ಪರಿಸರ ಸಂರಕ್ಷಣೆ, ನಂಬಿಕೆ, ಆಚಾರ ವಿಚಾರಗಳ ಜೊತೆ ಪರಿಸರದ ನಂಟು ಮತ್ತು ಸಮುದಾಯಗಳ ಪ್ರಾಮುಖ್ಯತೆಗಳನ್ನು ಹೊಂದಿದ್ದು, ಇಂತಹ ಸಿನಿಮಾಗಳನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ- ನಿರ್ದೇಶಕನಾಗಿ, ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ.


ಇದನ್ನೂ ಓದಿ:Nani : ʼಕೆಜಿಎಫ್‌ʼ ಬಗ್ಗೆ ಹಾಸ್ಯ ಮಾಡಿದ್ದ ನಿರ್ದೇಶಕನಿಗೆ ಚಳಿ ಬಿಡಿಸಿದ ನಟ ʼನಾನಿʼ..!


ಪರಿಸರ ಸುಸ್ಥಿರತೆಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳು ಮುಂಚೂಣಿಯಲ್ಲಿವೆ. ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ ಹಾಗೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು, ಈ ಕುರಿತು ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.


ಮಾರ್ಚ್ 17 ರಂದು ಸ್ವಿಜರ್ಲ್ಯಾಂಡ್‌ನಲ್ಲಿ ʼಕಾಂತಾರʼ ಸಿನಿಮಾ ಪ್ರದರ್ಶನ..!


ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಪೂರ್ತಿ ಸವಾಲುಗಳನ್ನು ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯತ್ತ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಇಲ್ಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದು ರಿಷಬ್‌ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.