Rishab Shetty: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮುಡಿಗೇರಿದ ರಾಷ್ಟ್ರ ಪ್ರಶಸ್ತಿ

rishab shetty national award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದಿದ್ದು, ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ.

Written by - Chetana Devarmani | Last Updated : Aug 16, 2024, 04:13 PM IST
    • ರಾಷ್ಟ್ರ ಪ್ರಶಸ್ತಿ ಪಡೆದ ರಿಷಬ್‌ ಶೆಟ್ಟಿ
    • ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ
    • ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ
Rishab Shetty: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮುಡಿಗೇರಿದ ರಾಷ್ಟ್ರ ಪ್ರಶಸ್ತಿ title=

Kantara Star Rishab Shetty: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಪಡೆದಿದ್ದು, ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ. ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಕಳೆದು ಹೋಗಿವೆ. 

70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಹೆಸರನ್ನು ಘೋಷಿಸಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಜೇತರ ಹೆಸರನ್ನು ಬಹಿರಂಗಪಡಿಸಿತು. ಕನ್ನಡದ ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. 

ಇದನ್ನೂ ಓದಿ: ಚಿರಂಜೀವಿ ಅಳಿಯನಾಗಬೇಕಿತ್ತಾ ಅಲ್ಲು ಅರ್ಜುನ್... ಈ ಕಾರಣಕ್ಕೆ ಆಸೆ ಈಡೇರಲಿಲ್ಲವೇ!?

ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಒಳಗೊಂಡಂತೆ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಕ್ಟೋಬರ್ 2024 ರಂದು ನಿಗದಿಪಡಿಸಿದ ಸಮಾರಂಭದಲ್ಲಿ ಗೌರವಿಸುತ್ತಾರೆ.

ಕಾಂತಾರ ಸಿನಿಮಾದಲ್ಲಿನ ಅದ್ಭುತ ನಟನೆಗೆ ರಿಷಬ್ ಶೆಟ್ಟಿ ರಾಷ್ಟ್ರಪ್ರಶಸ್ತಿ ಪಡೆದಿದ್ದಾರೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರು ಸ್ಪರ್ಧೆಯೊಡ್ಡಿದ್ದರು. ಆದರೆ ರಾಷ್ಟ್ರ ಪ್ರಶಸ್ತಿ ರಿಷಬ್ ಶೆಟ್ಟಿ ಮುಡಿಗೇರಿದೆ. 

ಇದನ್ನೂ ಓದಿ: ʻವೀರಪ್ಪ ನಾಯ್ಕʼ ಸಿನಿಮಾಗೆ ವಿಷ್ಣುವರ್ಧನ್ ಪಡೆದ ಸಂಭಾವನೆ ಎಷ್ಟು ಗೊತ್ತೇ?

1975 ರಲ್ಲಿ ಎಂ ವಿ ವಾಸುದೇವ ಅವರಿಗೆ ಚೋಮನ ದುಡಿ ಸಿನಿಮಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದರು. ಆ ಬಳಿಕ 1986 ರಲ್ಲಿ ಕಮಲ್‌ ಹಾಸನ್‌ ಅವರ ಸಹದರ ಚಾರುಹಾಸನ್ ಅವರು ತಬರನ ಕಥೆ ಸಿನಿಮಾಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದರು. 2014 ರಲ್ಲಿ ನಾನು ಅವನಲ್ಲ...ಅವಳು ಕನ್ನಡ ಚಲನಚಿತ್ರದಲ್ಲಿ ತೃತೀಯಲಿಂಗಿ ವ್ಯಕ್ತಿಯ ಪಾತ್ರಕ್ಕಾಗಿ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ದೊರೆತಿತ್ತು. ದಶಕದ ಬಳಿಕ ಈಗ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News