ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಬಾಕ್ಸಾ ಆಫೀಸ್ ಧೂಳಿಪಟ ಮಾಡಿದೆ. ಬಿಡುಗಡೆಯಾದ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಈ ಚಿತ್ರ ಹೌಸ್‍ಫುಲ್ ಪ್ರದರ್ಶನ ಕಾಣುವ ಮೂಲಕ ಸಖತ್ ಸೌಂಡ್ ಮಾಡುತ್ತಿದೆ. ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ‘ಕಾಂತಾರ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ.
ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿ ನಿರೀಕ್ಷೆಗೂ ಮೀರಿ ಅದ್ಭುತ ಯಶಸ್ಸು ಗಳಿಸಿರುವ ‘ಕಾಂತಾರ’ವನ್ನು ನೋಡಿದ ಪ್ರತಿಯೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿ ಸಂಸ್ಕೃತಿಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದ್ದು, ರಿಷಬ್ ಶೆಟ್ಟಿಗೆ ಪ್ರೇಕ್ಷಕ ಪ್ರಭುಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಲ್ಲಿಯೂ ಬಿಡುಗಡೆಯಾದ ‘ಕಾಂತಾರ’ ಸಖತ್ ಸದ್ದು ಮಾಡಿದೆ.
ಇದನ್ನೂ ಓದಿ: Adipurush team : ಪ್ರಭಾಸ್, ಸೈಫ್ ಅಲಿ ಖಾನ್, ಓಂ ರಾವುತ್ ವಿರುದ್ಧ ಕೇಸ್!
‘ಕಾಂತಾರ’ಗೆ ಅತಿಹೆಚ್ಚು ರೇಟಿಂಗ್!
ಇಂದಿನಿಂದ ‘ಕಾಂತಾರ’ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗುತ್ತಿದೆ. ಶೀಘ್ರವೇ ಇನ್ನುಳಿದ ಭಾಷೆಗಳಲ್ಲಿಯೂ ರಿಲೀಸ್ ಆಗಲಿದ್ದು, ಪ್ಯಾನ್ ಇಂಡಿಯಾ ಸಿನಿಮಾ ಆಗಿ ಕಮಾಲ್ ಮಾಡಲು ಸಜ್ಜಾಗಿದೆ. ಗಳಿಕೆಯಲ್ಲಿ ಸದ್ಯದಲ್ಲಿಯೇ 100 ಕೋಟಿ ಕ್ಲಬ್ ಸೇರಲಿರುವ ‘ಕಾಂತಾರ’ ಸಿನಿಮಾವು ಐಎಂಡಿಬಿಯಲ್ಲಿ ಅತಿ ಹೆಚ್ಚು ವೋಟ್ ಮತ್ತು ರೇಟಿಂಗ್ ಪಡೆದುಕೊಂಡ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಆರಂಭದಿಂದಲೂ ಐಎಂಡಿಬಿಯಲ್ಲಿ ‘ಕಾಂತಾರ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರಸ್ತುತ ಈ ಸಿನಿಮಾ 10ಕ್ಕೆ 9.5 ರೇಟಿಂಗ್ ಪಡೆದುಕೊಂಡಿದೆ. ಈ ಮೂಲಕ ದೇಶದಲ್ಲಿಯೇ ಗರಿಷ್ಠ ರೇಟಿಂಗ್ ಕಾಯ್ದುಕೊಂಡಿರುವ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ʼಘೋಸ್ಟ್ʼ ಘರ್ಜನೆ ಶುರು : ಶಿವಣ್ಣ ಸಿನಿಮಾಗೆ ಗೀತಾ ಶಿವರಾಜಕುಮಾರ್ ಕ್ಲಾಪ್
ಐಎಂಡಿಬಿಯಲ್ಲಿ ಇಲ್ಲಿವರೆಗೆ 13,301 ವೋಟಿಂಗ್ ಬಂದಿದ್ದು, ಈ ಪೈಕಿ 12 ಸಾವಿರಕ್ಕೂ ಅಧಿಕ ಮಂದಿ 10ಕ್ಕೆ 10 ರೇಟಿಂಗ್ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ದೇಶನದ ‘777 ಚಾರ್ಲಿ’ ಚಿತ್ರಕ್ಕೆ 10ಕ್ಕೆ 9 ರೇಟಿಂಗ್ ಬಂದಿದ್ದರೆ, ಕಮಲ್ ಹಾಸನ್ ನಟನೆಯ ‘ವಿಕ್ರಂ’ ಮತ್ತು ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಚಿತ್ರಕ್ಕೆ 8.4 ರೇಟಿಂಗ್ ಬಂದಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.