ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಪ್ಯಾನ್ ಇಂಡಿಯಾ ಸಿನಿಮಾ ಬ್ಸಾಕ್ಸ್ ಆಫೀಸ್ ಧೂಳಿಪಟ ಮಾಡಿದೆ. ಬಿಡುಗಡೆಯಾದ ಎಲ್ಲಾ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕಾಂತಾರ’ ಸಿನಿಮಾ ಅಪಾರ ಜನಮೆಚ್ಚುಗೆಗೆ ಪಾತ್ರವಾಗಿದೆ.
ಗಳಿಕೆಯಲ್ಲಿ ಹೊಸ ದಾಖಲೆ ಸೃಷ್ಟಿಸಿರುವ ‘ಕಾಂತಾರ’ ಸಿನಿಮಾ ಕಳೆದೊಂದು ತಿಂಗಳಿನಿಂದ ಜನಮನ ಸೆಳೆದಿದೆ. ‘ಕಾಂತಾರ’ ಸಿನಿಮಾ ವೀಕ್ಷಿಸಿದ ಭಾರತೀಯ ಚಿತ್ರರಂಗದ ದಿಗ್ಗಜ ನಟ-ನಟಿಯರು, ನಿರ್ಮಾಪಕರು-ನಿರ್ದೇಶಕರು ರಿಷಬ್ ಶೆಟ್ಟಿಯವರ ನಟನೆ ಮತ್ತು ನಿರ್ದೇಶನವನ್ನು ಮನಸಾರೆ ಹಾಡಿ ಹೊಗಳಿದ್ದಾರೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಸಿನಿಮಾ ಇದೀಗ OTT ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.
ಇದನ್ನೂ ಓದಿ: ಸಮಂತಾ ಡೆಡಿಕೇಷನ್ ನೋಡಿ ಬೆರಗಾದ ಹಾಲಿವುಡ್ ಸಾಹಸ ನಿರ್ದೇಶಕ ಯಾನಿಕ್ ಬೆನ್!
ಹೌದು, ಶೀಘ್ರವೇ ‘ಕಾಂತಾರ’ ಸಿನಿಮಾ OTT ಪ್ಲಾಟ್‌ಫಾರ್ಮ್‍ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದ OTT ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋಗೆ ದೊಡ್ಡ ಮೊತ್ತಕ್ಕೆ ಮಾರಾಟ ಮಾಡಲಾಗಿದೆಯಂತೆ. ಶೀಘ್ರದಲ್ಲೇ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಲಿದೆ. ನಿರ್ಮಾಪಕರು ಇನ್ನೂ ಬಿಡುಗಡೆಯ ದಿನಾಂಕವನ್ನು ಘೋಷಿಸದಿದ್ದರೂ, ಅಭಿಮಾನಿಗಳು OTTಯಲ್ಲಿ ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಮತ್ತು ಕಿಶೋರ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾವನ್ನು ನಿರ್ಮಾಪಕ ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದೆ. ಇದು ಈಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಸೇರಿದಂತೆ ಇತರ ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ OTTಯಲ್ಲಿ ಬಿಡುಗಡೆಯಾಗಲಿದೆ.
‘ಕಾಂತಾರ’ ಹಿಂದಿ ಅವತರಣಿಕೆಯು ‘ಥ್ಯಾಂಕ್ ಗಾಡ್’, ‘ರಾಮ್ ಸೇತು’ ಮತ್ತು ಹಾಲಿವುಡ್ ಸಿನಿಮಾ ‘ಬ್ಲ್ಯಾಕ್ ಆಡಮ್’ನಂತಹ ಚಿತ್ರಗಳಿಗೆ ತೀವ್ರ ಸ್ಪರ್ಧೆ ಒಡ್ಡಿದ್ದು, ಗಳಿಕೆಯಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಕನ್ನಡ ಸಿನಿಮಾ ಮತ್ತು ಚಿತ್ರರಂಗದ ಬೆಳವಣಿಗೆಯನ್ನು ಮನಸಾರೆ ಹೊಗಳಿದ್ದಾರೆ.
ಇದನ್ನೂ ಓದಿ: Kantara With ABD: ರಿಷಬ್ ಶೆಟ್ಟಿ ಜೊತೆ ‘ಕಾಂತಾರ’ ಡೈಲಾಗ್ ಹೊಡೆದ ಎಬಿ ಡಿವಿಲಿಯರ್ಸ್!
‘ಕಾಂತಾರ’ ಚಿತ್ರವು ಖ್ಯಾತ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಚಿತ್ರವು ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸಾಧನೆ ಮಾಡಿದೆ. ಈ ಸಿನಿಮಾ ಇದುವರೆಗೆ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದೆ. ‘ಕಾಂತಾರ’ ಸಿನಿಮಾವು ಹೊಸದಾಗಿ ಬಿಡುಗಡೆಯಾಗಲಿರುವ ಸಿನಿಮಾಗಳ ಮೇಲೆ ಪರಿಣಾಮ ಬೀರಿದೆ. ‘ಇಂದು ‘ಬನಾರಸ್’ ಬಿಡುಗಡೆಯಾಗಲಿದ್ದರೆ, ನವೆಂಬರ್ 11ರಂದು ‘ದಿಲ್ ಪಸಂದ್’ ಚಿತ್ರಗಳು ಬಿಡುಗಡೆಯಾಗಲಿವೆ. ‘ಕಾಂತಾರ’ದ ಯಶಸ್ವಿ ಪ್ರದರ್ಶನ ಮುಂದುವರೆದಿದ್ದು, ಹೊಸ ಚಿತ್ರಗಳಿಗೆ ಥಿಯೇಟರ್ ಸಮಸ್ಯೆ ಎದುರಾಘಿದೆ.
‘ಕಾಂತಾರ’ ಕಥೆಯು ದಕ್ಷಿಣ ಕನ್ನಡದ ಒಂದು ಕಾಲ್ಪನಿಕ ಹಳ್ಳಿಯಲ್ಲಿ ನಡೆಯುತ್ತದೆ. ಕರಾವಳಿ ಭಾಗದ ಸಂಸ್ಕೃತಿ, ಆಚಾರ-ವಿಚಾರ ಮತ್ತು ಪಂಜುರ್ಲಿ ದೈವದ ಬಗ್ಗೆ ಪರಿಣಾಮಕಾರಿಯಾಗಿ ಚಿತ್ರದಲ್ಲಿ ತೋರಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.