Rishi in a multi crore budget film: ಕವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಅವರು ನಟಿಸುತ್ತಿರುವ ಬಹುಕೋಟಿ ಬಜೆಟ್ ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿರುತ್ತಾರೆ ಮತ್ತು ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ.


COMMERCIAL BREAK
SCROLL TO CONTINUE READING

ಈ ಚಿತ್ರ ಜೂನ್ ಎರಡರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಸಿನಿಮಾದ ಹೆಸರು. ನಿರ್ಮಾಣ ಸಂಸ್ಥೆ ಮತ್ತು ತಾರಾ ಬಳಗದ ಬಗ್ಗೆ ಜೂನ್ 2ರಂದು ಚಿತ್ರತಂಡ ತಿಳಿಸಲಿದೆ.  


ಇದನ್ನೂ ಓದಿ : ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ʼಸಿದ್ದರಾಮಯ್ಯʼ ವಿರುದ್ಧ ಚೇತನ್‌ ಆಕ್ರೋಶ..!


ಈ ಚಿತ್ರವನ್ನು ಡಿಯರ್ ವಿಕ್ರಂ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ ಎಸ್ ನಂದೀಶ್ ಅವರು ನಿರ್ದೇಶನ ಮಾಡಲಿದ್ದಾರೆ. ತಮ್ಮ ಪ್ರಥಮ ಚಿತ್ರ ಓ ಟಿ ಟಿ ಯಲ್ಲಿ ಬಿಡುಗಡೆಗೊಂಡು ಅದ್ಭುತ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ಮತ್ತು ಪ್ರೋತ್ಸಾಹ ಕೊಟ್ಟಿದೆ. ಡಿಯರ್ ವಿಕ್ರಂ ಚಿತ್ರವನ್ನು ಓಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ.


ನೈಜ ಘಟನೆಗಳ ಆಧರಿಸಿದ ಚಿತ್ರ "ಡಿಯರ್ ವಿಕ್ರಂ", ನಕ್ಸಲ್ ಮತ್ತು ರಾಜಕೀಯ ಕಥಾಂದರ ಗಳನ್ನು ಒಳಗೊಂಡ ಚಿತ್ರವಾಗಿತ್ತು. ಓಟಿಟಿಯಲ್ಲಿ ಬಿಡುಗಡೆಗೊಂಡ ನಂತರ ತುಂಬಾ ಜನ ಇದು ಥಿಯೇಟರ್ ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಮಾತನಾಡಿದ್ದಾರೆ.


ಇದನ್ನೂ ಓದಿ : ಕಲ್ಲು ಮನಸ್ಸಿನವರ ಕಣ್ಣಲ್ಲೂ ನೀರು ತರಿಸುತ್ತೆ ಮಿಯಾ ಖಲೀಫಾ ಜೀವನ


ಆದರೆ ನಿರ್ದೇಶಕರು ನೇರವಾಗಿ ಓಟಿಟಿ ನಲ್ಲಿ ಬಿಡುಗಡೆಗೊಂಡಿದ್ದಕ್ಕೆ ಯಾವುದೇ ಬೇಸರವಿಲ್ಲ ಯಾಕೆಂದರೆ ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ. ಥಿಯೇಟರ್ ನಷ್ಟೇ ಓಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ ಎಂದು ಹೇಳಿದ್ದಾರೆ.


ಆದರೆ ಈಗ ತಯಾರಿ ನಡೆಯುತ್ತಿರುವ ಈ ಚಿತ್ರ, ಚಿತ್ರಮಂದಿರಗಳಲ್ಲಿ ಮತ್ತು ಓಟಿಟಿಯಲ್ಲಿ ಬಿಡುಗಡೆಗೊಳ್ಳುತ್ತದೆ. ತಾರಾ ಬಳಗದಲ್ಲಿ ತೆಲುಗಿನ ಕೆಲವು ಪ್ರಖ್ಯಾತ ನಟರು ಕೂಡ ನಟಿಸುತ್ತಿದ್ದಾರೆ.


ಇದನ್ನೂ ಓದಿ : ಪುಷ್ಪ 2 ಸಿನಿಮಾದಲ್ಲಿನ ರಶ್ಮಿಕಾ ಮಂದಣ್ಣ ಸೀನ್ ಲೀಕ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ