ಬೆಂಗಳೂರು: ಕೋವಿಡ್ -19 (COVID-19) ಪ್ರೇರಿತ ಲಾಕ್‌ಡೌನ್‌ನಿಂದ ಬಾಧಿತರಾದ ಕನ್ನಡ ಚಲನಚಿತ್ರೋದ್ಯಮ ಕಾರ್ಮಿಕರಿಗೆ ಪರಿಹಾರವಾಗಿ ನಟ ರಾಕಿಂಗ್ ಸ್ಟಾರ್ ಯಶ್ 1.5 ಕೋಟಿ ರೂ. ದೇಣಿಗೆ ಘೋಷಿಸಿದ್ದಾರೆ. ಇದರಿಂದ ಕರೋನಾ ಸಂಕಷ್ಟದಿಂದ ತೊಂದರೆಗೆ ಸಿಲುಕಿರುವ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಸಹಾಯಕ್ಕೆ ಮುಂದಾಗಿದ್ದು ಪ್ರತಿ ಕುಟುಂಬದ ಬ್ಯಾಂಕ್ ಖಾತೆಯಲ್ಲಿ 5000 ರೂ. ನೀಡುತ್ತಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ (Rocking Star Yash), ಕಣ್ಣಿಗೆ ಕಾಣದ ವೈರಸ್ (Coronavirus) ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ.. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ (Cinema Kutumba) ಜೊತೆ ನಿಲ್ಲುವ ಸಮಯ. ಹಾಗಾಗಿ ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗೆಲಿಗೆ ತಲಾ 5000 ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ.
ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು (Sa.Ra. Govind) ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವವ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ.
ಇದನ್ನೂ ಓದಿ- ಹಾಲಿವುಡ್ ಗೆ ಎಂಟ್ರಿ ಕೊಟ್ಟ ಬಾಹುಬಲಿ..! 'Mission Impossible 7' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್ ?
ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ.. ಬದಲಿಗೆ ಶಕ್ತಿ ಇರುವ ಹೃದಯವಂತರು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗವ್ಳು ಕೊಟ್ಟು ನಿಂತು ಸಹಾಯ ಮಾಡಿದರೆ ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ..
ನಿಮ್ಮ ಪ್ರೀತಿಯ
ಯಶ್
ಎಂದು ಈ ಪತ್ರದಲ್ಲಿ ಬರೆದಿದ್ದಾರೆ.
#togetherwestand #humanity pic.twitter.com/46FYT9pThz
— Yash (@TheNameIsYash) June 1, 2021
ರಾಖಿ ಭಾಯ್ ಅವರ ಈ ನಡೆಗೆ ಅವರ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು 'ಯಶ್ ಬಾಸ್ ಅಭಿಮಾನಿಗಳಾಗಿರುವುದಕ್ಕೆ ಹೆಮ್ಮೆ ಅನಿಸುತ್ತಿದೆ' ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಹಲವರು ಯಶ್ (Rocking Star Yash) ಅವರನ್ನು ಗೋಲ್ಡನ್ ಹಾರ್ಟ್ ಹೊಂದಿರುವ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.
ಇದನ್ನೂ ಓದಿ- " ಕೊರೊನಾ ಲಸಿಕೆಗೆ ಕೊರತೆ ಇಲ್ಲ, ಆದರೆ ಸ್ವಲ್ಪ ತಾಳ್ಮೆ ಬೇಕಾಗಿದೆ"
ಈ ಹಿಂದೆ ಸ್ಯಾಂಡಲ್ ವುಡ್ ನಟರಾದ ರಿಯಲ್ ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ಕಿಚ್ಚ ಸುದೀಪ್ ಮತ್ತು ದುನಿಯಾ ವಿಜಯ್ ಅವರು ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಇದಲ್ಲದೆ ನಟಿಯರಾದ ಪ್ರಣಿತಾ ಸುಭಾಷ್, ರಾಗಿಣಿ ದ್ವಿವೇದಿ, ಹರ್ಷಿಕಾ ಪೂಣಚ್ಚ ಅವರು ಸಹ ಅಗತ್ಯವಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಉದ್ಯಮದ ಎಲ್ಲಾ ಕಾರ್ಮಿಕರಿಗೆ ಲಸಿಕೆ ನೀಡುವ ಉದ್ದೇಶದಿಂದ ನಟಿ ಮತ್ತು ರಾಜಕಾರಣಿ ಸುಮಲತಾ ಅಂಬರೀಶ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೂನ್ 1 ರಿಂದ ಉಚಿತ ವ್ಯಾಕ್ಸಿನೇಷನ್ ಡ್ರೈವ್ (Vaccination Drive) ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.