ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್!

ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ಪ್ರಶಾಂತ್ ನೀಲ್ ನಿರ್ದೇಶಿಸಿರುವ ಅದ್ಧೂರಿ ಚಿತ್ರ ಕೆಜಿಎಫ್'ನಲ್ಲಿ ಯಶ್ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

Divyashree K Divyashree K | Updated: Sep 19, 2018 , 07:36 PM IST
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಬಹುನಿರೀಕ್ಷಿತ ಸಿನಿಮಾ 'ಕೆಜಿಎಫ್' ಟ್ರೇಲರ್ ಮತ್ತು ಸಿನಿಮಾ ಬಿಡುಗಡೆ ದಿನಾಂಕ ಕಡೆಗೂ ಫಿಕ್ಸ್ ಆಗಿದೆ. ಯಶ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. 

ನಮ್ಮ ಹೃದಯಕ್ಕೆ ಹತ್ತಿರವಾಗುವಂತಹದ್ದನ್ನು ನಾವೆಲ್ಲರೂ ಮಾಡಿದ್ದೇವೆ ಮತ್ತು ಅದನ್ನು ನೋಡಲು ನಿಮ್ಮನ್ನು ಮತ್ತಷ್ಟು ಕಾಯುವಂತೆ ಮಾಡುವುದಿಲ್ಲ ಎಂದು ಹೇಳಿರುವ ಯಶ್, ಕೆಜಿಎಫ್​ ಚಿತ್ರದ ಟ್ರೇಲರ್​ ಅಕ್ಟೋಬರ್​ 14 ರಂದು ಮತ್ತು ಕೆಜೆಎಫ್​ ಚಿತ್ರ ನವೆಂಬರ್​ 16ರಂದು ಬಿಡುಗಡೆಯಾಗಲಿದೆ ಎಂದು ಫೇಸ್ಬುಕ್'ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ಪ್ರಶಾಂತ್ ನೀಲ್ ನಿರ್ದೇಶಿಸಿರುವ ಅದ್ಧೂರಿ ಚಿತ್ರ ಕೆಜಿಎಫ್'ನಲ್ಲಿ ಯಶ್ ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಜೊತೆಗೆ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಟಾಲಿವುಡ್ ನಟಿ ತಮನ್ನಾ ಭಾಟಿಯಾ ಐಟಂ ಸಾಂಗ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ವಸಿಷ್ಠ ಸಿಂಹ ಮುಂತಾದವರು ನಟಿಸಿದ್ದಾರೆ.   

ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತ ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆ ಎನ್ನಲಾಗಿದೆ.