ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರವು ನಾಳೆಯಿಂದ ವಿಶ್ವದಾದ್ಯಂತ 10 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆಯಾಗಲಿದೆ.ಈಗ ಈ ವಿಷಯವನ್ನು ಹೊಂಬಾಳೆ ಫಿಲಂಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಖಚಿತಪಡಿಸಿದೆ.


COMMERCIAL BREAK
SCROLL TO CONTINUE READING

ಕೆಜಿಎಫ್ 2 ಚಿತ್ರವು ಬಿಡುಗಡೆಗೂ ಮುನ್ನವೇ ವಿಶ್ವದಾದ್ಯಂತ ಸಾಕಷ್ಟು ಕ್ರೇಜ್ ಹುಟ್ಟಿಸಿದೆ. ಈ ಚಿತ್ರಕ್ಕೆ ಇರುವ ಕ್ರೇಜ್ ನೋಡಿ ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಚಡ್ಡಾ ಹಾಗೂ ಶಾಹಿದ್ ಕಪೂರ್ ಅಭಿನಯದ ಜರ್ಸಿ ಸಿನಿಮಾವನ್ನು ಮುಂದೂಡಲಾಗಿತ್ತು. ಉತ್ತರ ಭಾರತದಲ್ಲಂತೂ ಕೆಜಿಎಫ್ ಚಿತ್ರಕ್ಕೆ ವಿಪರೀತ ಕ್ರೇಜ್ ಹುಟ್ಟಿಕೊಂಡಿದೆ. ಈಗಾಗಲೇ ಈ ಭಾಗದಲ್ಲಿ ಮುಂಗಡ ಬುಕ್ಕಿಂಗ್ ದಾಖಲೆಯನ್ನು ಬರೆದಿದೆ.


ಇದನ್ನೂ ಓದಿ: ಸೌತ್‌ ಇಂಡಿಯಾದಲ್ಲಿ ಹಿಂದಿ ಚಿತ್ರಗಳ ಹವಾ ಕಡಿಮೆಯಾಗಲು ಇದೇ ಮುಖ್ಯ ಕಾರಣ ಎಂದ ನಟ ಯಶ್‌!


ಬೀಸ್ಟ್ ಗೆ ಕೆಜಿಎಫ್ 2 ಭಾರಿ ಹೊಡೆತ ನೀಡಲಿದೆ ಎನ್ನಲಾಗುತ್ತಿದೆ.


ಸಿನಿಮಾ ಮಾರುಕಟ್ಟೆಯ ವಿಶ್ಲೇಷಕರ ಪ್ರಕಾರ ಈ ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ ನಲ್ಲಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಲಿದೆ ಎನ್ನಲಾಗುತ್ತಿದೆ.ಕೇವಲ ಈಗ ಈ ಚಿತ್ರ ಪ್ಯಾನ್ ಇಂಡಿಯಾ ಆಗಿ ಉಳಿದಿಲ್ಲ, ಪ್ಯಾನ್ ವರ್ಲ್ಡ್ ಆಗಿ ಪರಿವರ್ತನೆಯಾಗಿದೆ. ಒಂದು ಮೂಲಗಳ ಪ್ರಕಾರ ಈ ಸಿನಿಮಾ ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹೊಸ ದಾಖಲೆಯನ್ನೇ ಬರೆಯಲಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ತೂಫಾನ್‌ ಬಳಿಕ ಈಗ ಸುಲ್ತಾನ್‌ ಹವಾ.. ಬಿಡುಗಡೆಯಾದ ಒಂದೇ ಗಂಟೆಯಲ್ಲಿ ದಾಖಲೆ!!


ಆರಂಭದಿಂದಲೂ ಟೀಸರ್, ಸಾಂಗ್ ನಿಂದಲೂ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದ್ದ ಕೆಜಿಎಫ್ 2 ಈಗ ನಿಜ ಅರ್ಥದಲ್ಲಿ ಪ್ಯಾನ್ ವರ್ಲ್ಡ್ ಸಿನಿಮಾ ಆಗಿದೆ.ಈಗಾಗಲೇ ಎಲ್ಲಾ ಸಾಮಾಜಿಕ ವೇದಿಕೆಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಈ ಚಿತ್ರ ಈ ಹಿಂದೆ ಎಂದೂ ನಿರ್ಮಿಸಿದ ದಾಖಲೆಗೆ ಕಾರಣವಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.