Yash Letter About His Birthday Celebration:  ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ ಕಳೆದ 4 ವರ್ಷಗಳಿಂದ ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಷಚರಿಸಿಕೊಳ್ಳದವರೂ, ಈ ವರ್ಷ ಹುಟ್ಟುಹಬ್ಬಕ್ಕೆ ಇನ್ನೇನು ಮೂರು ದಿನ ಬಾಕಿಯಿರುವ ವೇಳೆ, ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಯಶ್‌, "ಜನವರಿ 8.. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ..ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು.. ಸದಾಕಾಲ ನನ್ನ ಜೊತೆ ಇರುವ. ನಿಮ್ಮ ಪ್ರೀತಿ, ಅಭಿಮಾನವೇ. ನನಗೆ ಹುಟ್ಟುಹಬ್ಬದ ಉಡುಗೊರೆ.ನಿಮ್ಮ ಪ್ರೀತಿಯ ಯಶ್" ಎಂದು ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಕೆಜಿಎಫ್‌ ನಟ ಯಶ್‌ ಬರೆದ ಪತ್ರವನ್ನು ನೋಡಿದ ಅಭಿಮಾನಿಗಳು ಬೇಸರವಾಗಿದ್ದಾರೆ. ಕಳೆದ ವರ್ಷ ಕೂಡ ಇದೇ ರೀತಿ ಪತ್ರ ಬರೆದು ನಿರಾಸೆ ಮೂಡಿಸಿದ್ದು, ಪತ್ರದಲ್ಲಿ "ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ" ಎಂದು ಬರೆದಿದ್ದರು. ಆದರೆ  ಒಂದು ತಿಂಗಳ ಹಿಂದೆ ತಮ್ಮ 19ನೇ ಸಿನಿಮಾ ಘೋಷಣೆ ಮಾಡಿ,'ಟಾಕ್ಸಿಕ್' ಹೆಸರಿನಲ್ಲಿ ಮುಂದಿನ ಚಿತ್ರ ಎಂದಿದ್ದರು. ಟೈಟಲ್ ಅನೌನ್ಸ್‌ಮೆಂಟ್ ಟೀಸರ್ ಹಿಟ್ ಆಗಿತ್ತು. 


"ಮಾಫಿಯಾ"ದಿಂದ ಬಂತು ಸುಂದರ ಯುಗಳಗೀತೆ"


'ಟಾಕ್ಸಿಕ್' ಎನ್ನುವ ಇಂಟ್ರೆಸ್ಟಿಂಗ್ ಟೈಟಲ್ ಇರುವ ಸಿನಿಮಾದಲ್ಲಿ ಯಶ್‌ಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್‌ ಜೊತೆ ಸೇರಿ ಯಶ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಅಂದಾಜು 170 ಕೋಟಿ ರೂ. ಬಜೆಟ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣ, ಪ್ರಮೋಷನ್, ರಿಲೀಸ್ ಪ್ಲ್ಯಾನ್ ನಡೀತಿದೆ. 2019ರಲ್ಲಿ ಕೋವಿಡ್‌ಗೂ ಮುನ್ನ ಯಶ್ ನಗರದ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಅಭಿಮಾನಿಗಳು 215 ಅಡಿ ಎತ್ತರದ ಕಟೌಟ್ ನಿಲ್ಲಿಸಿ, 5000 ಕೆಜಿ ಕೇಕ್ ತಂದು ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಿದ್ದರು. ಆ ವರ್ಷ ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿ ಆಗಿದ್ದರು. ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಿ ಕೈ ಕುಲುಕಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. 


 ಕೊರೋವಾ ಹಾವಳಿಯಿಂದ 3 ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳದ ಯಶ್‌, ಕಳೆದ ವರ್ಷ ಯಶ್‌19 ಸಿನಿಮಾ ಅನೌನ್ಸ್ ಮಾಡಲು ಸಾಧ್ಯವಾಗದ ಕಾರಣ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು. ಬಳಿಕ ಕುಟುಂಬಸ್ಥರ ಜೊತೆ ವಿದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು, ತಿಂಗಳ ಬಳಿಕ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ ಆವರಣದಲ್ಲಿ ಫ್ಯಾನ್ಸ್‌ ಭೇಟಿ ಮಾಡಿದ್ದರು. ಅಭಿಮಾನಿಗಳು ಕೊಟ್ಟ ಉಡುಗೊರೆಗಳನ್ನು ಸ್ವೀಕರಸಿದ್ದರು. ಇನ್ನು ಈ ವರ್ಷ ಕೂಡ 'ಟಾಕ್ಸಿಕ್' ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿರುವುದರಿಂದ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. 
 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.