KGF Chapter 2: ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ..?

ವರದಿಗಳ ಪ್ರಕಾರ ‘ಕೆಜಿಎಫ್-2’ ಚಿತ್ರ ತನ್ನ ಮೊದಲ ದಿನವೇ 130 ಕೋಟಿ ರೂ.ಗಿಂತಲೂ ಹೆಚ್ಚು ಗಳಿಕೆ ಮಾಡಿದೆ ಎಂದು ವರದಿಯಾಗಿದೆ.

Written by - Puttaraj K Alur | Last Updated : Apr 15, 2022, 11:17 AM IST
  • ಬಾಕ್ಸ್ ಆಫೀಸ್ ಧೂಳಿಪಟ ಮಾಡುತ್ತಿರುವ ಕೆಜಿಎಫ್ ಚಾಪ್ಟರ್ 2
  • ಗಳಿಕೆಯಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್ ಯಶ್ ಚಿತ್ರ
  • ‘ಕೆಜಿಎಫ್ -2’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ..?
KGF Chapter 2: ‘ಕೆಜಿಎಫ್ – 2’ ಚಿತ್ರದ ಮೊದಲ ದಿನದ ಗಳಿಕೆ ಎಷ್ಟು ಗೊತ್ತಾ..? title=
‘ಕೆಜಿಎಫ್ -2’ ಮೊದಲ ದಿನದ ಗಳಿಕೆ ಎಷ್ಟು?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್- 2’ ಗುರುವಾರ ದೇಶ-ವಿದೇಶಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಥಿಯೇಟರ್‍ಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಭಾರತವೂ ಸೇರಿದಂತೆ 70ಕ್ಕೂ ಹೆಚ್ಚು ದೇಶಗಳಲ್ಲಿ ತೆರೆಕಂಡಿದ್ದು, ಸಿನಿಪ್ರೇಮಿಗಳಿಗೆ ಹೃದಯ ಗೆದ್ದಿದೆ.

ಆನ್‍ಲೈನ್ ಟಿಕೆಟ್ ಬುಕ್ಕಿಂಗ್‍ನಲ್ಲಿ ಕನ್ನಡದ ಚಿತ್ರವೊಂದು ಹೊಸ ದಾಖಲೆಯನ್ನೇ ಬರೆದಿದೆ. ಮೊದಲ ದಿನವೇ ಬರೋಬ್ಬರಿ 30ಲಕ್ಷಕ್ಕೂ ಹೆಚ್ಚು ಟಿಕೆಟ್‍ಗಳನ್ನು ಪ್ರೇಕ್ಷಕರು ಆನ್‍ಲೈನ್ ಮೂಲಕ ಬುಕ್ ಮಾಡಿದ್ದರು ಎಂದು ತಿಳಿದುಬಂದಿದೆ.   

ತೆರೆ ಮೇಲೆ ‘ರಾಕಿ ಭಾಯ್’ ಮತ್ತು ‘ಅಧೀರ’ನ ರೋಚಕ ಕದನವನ್ನು ಕಣ್ತುಂಬಿಕೊಂಡ ಪ್ರೇಕ್ಷಕರು ‘ಸಲಾಂ ರಾಕಿ ಭಾಯ್’ ಅಂತಾ ಹೇಳಿದ್ದಾರೆ. ಕನ್ನಡದ ಚಿತ್ರವೊಂದು ಬಾಲಿವುಡ್ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವನ್ನೇ ಶೇಕ್ ಶೇಕ್ ಮಾಡಿದೆ. ವಿದೇಶಗಳಲ್ಲಿಯೂ ‘ರಾಕಿ’ ಅಬ್ಬರ ಜೋರಾಗಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಅಗಾಧ ಮೆಚ್ಚುಗೆಗೆ ಪಾತ್ರವಾಗಿರುವ ‘ಕೆಜಿಎಫ್-2’ ಕಲೆಕ್ಷನ್ ವಿಚಾರದಲ್ಲಿ ಹೊಸ ದಾಖಲೆಯನ್ನೇ ನಿರ್ಮಿಸಿದೆ.

ಇದನ್ನೂ ಓದಿ: KGF: Chapter 2: ಕನ್ನಡದ ‘ರಾಕಿ’ ಅಬ್ಬರಕ್ಕೆ ಬಾಲಿವುಡ್ ಶೇಕ್ ಶೇಕ್..!

ಹೌದು, ವರದಿಗಳ ಪ್ರಕಾರ ‘ಕೆಜಿಎಫ್-2’ ಚಿತ್ರ ತನ್ನ ಮೊದಲ ದಿನವೇ 130 ಕೋಟಿ ರೂ.ಗಿಂತಲೂ ಹೆಚ್ಚು ಗಳಿಕೆ ಮಾಡಿದೆ ಎಂದು ವರದಿಯಾಗಿದೆ. ಚಿತ್ರ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ನಿರ್ಮಾಪಕರು ಇದುವರೆಗೂ ಅಧಿಕೃತ ಅಂಕಿ-ಅಂಶಗಳನ್ನು ನೀಡಿಲ್ಲ. ಆದರೆ, ‘ರಾಕಿ ಭಾಯ್’ ಅಬ್ಬರಕ್ಕೆ ಬಾಕ್ಸ್ ಆಫೀಸ್ ಉಡೀಸ್ ಆಗಿದೆ. ಅತಿಹೆಚ್ಚು ಸ್ಕ್ರೀನ್‍ಗಳಲ್ಲಿ ಹೆಚ್ಚಿನ ಪ್ರದರ್ಶನ ಕಂಡಿರುವ ‘ಕೆಜಿಎಫ್-2’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೊಳ್ಳೆ ಹೊಡೆದಿದೆ. ಮುಂಬರುವ ದಿನಗಳಲ್ಲಿ ಈ ಚಿತ್ರ ಇನ್ನೂ ಹಲವು ದಾಖಲೆಗಳನ್ನು ಮುರಿಯಲಿದೆ ಎಂದು ಹೇಳಲಾಗುತ್ತಿದೆ.

ವಿಷ್ಲೇಷಕರು ಹೇಳಿದ್ದೇನು..?

ಭಾರತೀಯ ಚಿತ್ರರಂಗದಲ್ಲಿ ‘ಕೆಜಿಎಫ್-2’ ಹೊಸ ದಾಖಲೆಯನ್ನೇ ಬರೆಯಬಹುದು ಎಂದು ಹೇಳಲಾಗುತ್ತಿದೆ. ಕೊರೊನಾ ಕಾರಣದಿಂದ ಅನೇಕ ಬಾರಿ ಮುಂದೂಡಿಕೆಯಾಗಿದ್ದ ಈ ಚಿತ್ರ 5 ಭಾಷೆಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ಮೊದಲ ದಿನವೇ 130 ರಿಂದ 140 ಕೋಟಿ ರೂ. ಕಲೆಕ್ಷನ್ ಮಾಡಲಿದೆ ಎಂದು ವಿಶ್ಲೇಷಕರು ಭವಿಷ್ಯ ನುಡಿದಿದ್ದರು. ‘ಕೆಜಿಎಫ್‌-2’ನ ಹಿಂದಿ ಆವೃತ್ತಿ ಆರಂಭಿಕ ದಿನದಲ್ಲಿ 50 ಕೋಟಿ ರೂ. ಗಳಿಸಲಿದೆ ಎಂದು ಹೇಳಿದ್ದರು.  

ಇದನ್ನೂ ಓದಿ: Yash Boss:ದೇಶಾದ್ಯಂತ ಟ್ರೆಂಡ್​ ಆಗ್ತಿದೆ ‘ಯಶ್‌ ಬಾಸ್’ ಹೆಸರು!

ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಸೇರಿದಂತೆ ಬಹುತಾರಾಗಣದ ಈ ಚಿತ್ರವನ್ನು ವಿಜಯ್ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್‍ನಡಿ ನಿರ್ಮಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News