Oh my God 2 : ʼಓ ಮೈ ಗಾಡ್ 2ʼ ಚಿತ್ರದ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಮೇಲೆ ಕಪಾಳಮೋಕ್ಷ ಮಾಡುವವರಿಗೆ ಅಥವಾ ಉಗುಳುವವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ಹಿಂದೂ ಪರಿಷತ್‌ ಭಾರತ್ ಘೋಷಿಸಿದೆ. ರಾಷ್ಟ್ರೀಯ ಹಿಂದೂ ಪರಿಷನ್ ಭಾರತ್ ಅಧ್ಯಕ್ಷ ಗೋವಿಂದ್ ಪರಾಶರ್ ಹೇಳಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಆಗ್ರಾದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಗಳು ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ಮತ್ತು ಓ ಮೈ ಗಾಡ್‌ 2 ಚಿತ್ರದ ಪೋಸ್ಟರ್‌ಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಓ ಮೈ ಗಾಡ್ 2 ಸಿನಿಮಾ ಓಹ್ ಮೈ ಗಾಡ್ ಚಿತ್ರದ ಮುಂದುವರಿದ ಭಾಗವಾಗಿದ್ದು, ಶಿವನ ದೂತರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಥಿಯೇಟರ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಹಿಂದುತ್ವ ಸಂಘಟನೆಗಳು ಹೇಳಿವೆ.


ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಜೈಲರ್‌ ಆರ್ಭಟ; ಸೀಕ್ವೆಲ್ ಅಲ್ಲ ಪ್ರೀಕ್ವೆಲ್.. ಹೀರೊ ರಜನಿನಾ? ಶಿವಣ್ಣನಾ?


ಚಿತ್ರದಲ್ಲಿನ ದೃಶ್ಯಗಳು ದೇವರ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸೆನ್ಸಾರ್ ಮಂಡಳಿ ಮತ್ತು ಕೇಂದ್ರ ಸರ್ಕಾರ OMG2 ಅನ್ನು ನಿಷೇಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತಷ್ಟು ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಸಧ್ಯ ಅಮಿತ್ ರೈ ನಿರ್ದೇಶನದ ಮತ್ತು ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಎ ಸರ್ಟಿಫಿಕೇಟ್ ನೀಡಿದೆ. 


ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಪಾತ್ರವು ಶಿವನ ಸಂದೇಶವಾಹಕನಾಗಿ ಕಾಣಿಸಿಕೊಂಡಿದ್ದಾರೆ. ಪಂಕಜ್ ತ್ರಿಪಾಠಿ ಮತ್ತು ಯಾಮಿ ಗೌತಮ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 11 ರಂದು ಬಿಡುಗಡೆಯಾಗಿದೆ. ಪರೇಶ್ ರಾವಲ್ ಮತ್ತು ಅಕ್ಷಯ್ ಕುಮಾರ್ ಅಭಿನಯದ 'OMG: ಓ ಮೈ ಗಾಡ್' ನ ಮುಂದುವರಿದ ಭಾಗವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ