ಬಾಲಿವುಡ್‌ನ ಅತ್ಯಂತ ನೆಚ್ಚಿನ ಮತ್ತು ರೊಮ್ಯಾಂಟಿಕ್ ಜೋಡಿಗಳು ಅನೇಕ ಮಂದಿ ಇದ್ದಾರೆ. ಅದರಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಜೋಡಿಯೂ ಒಂದು. ಸಿದ್ಧಾರ್ಥ್ ಮತ್ತು ಕಿಯಾರಾ ಅವರು ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಆದರೆ ಅದು ಎಲ್ಲರಿಗೂ ತಿಳಿದಿರುವ ಸತ್ಯ. ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ ಸಿದ್ಧಾರ್ಥ್ ಮತ್ತು ಕಿಯಾರಾ ಶೀಘ್ರದಲ್ಲೇ ಮದುವೆಯಾಗುತ್ತಾರೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಮುಂದಿನ ವರ್ಷ ಅಂದರೆ 2023 ರಲ್ಲಿ ಇವರ ಮದುವೆ ನಡೆಯಬಹುದು ಎಂದು ಅನೇಕರು ಹೇಳಿದ್ದಾರೆ. ಇದೀಗ ಹೊಸ ಸುದ್ದಿಯ ಪ್ರಕಾರ ಮದುವೆ ವದಂತಿ ನಡುವೆಯೇ ಈ ಜೋಡಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದು ಅಭಿಮಾನಿಗಳಿಗೆ ಶಾಕ್ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾಂತರಾ ನೋಡಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದೇನು?


ಮಾಧ್ಯಮ ವರದಿಗಳ ಪ್ರಕಾರ, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಮದುವೆಯ ಸುದ್ದಿಯ ನಡುವೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮುಂದಿನ ವರ್ಷ ಮದುವೆಯಾಗುವ ಮೊದಲು, ಈ ಜೋಡಿ ಬಹುಶಃ ಲಿವ್-ಇನ್ ಸಂಬಂಧಕ್ಕೆ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ. ಸಿದ್ ಮತ್ತು ಕಿಯಾರಾ ಉತ್ತಮ ಮನೆಗಾಗಿ ಹುಡುಕುತ್ತಿದ್ದಾರೆ ಮತ್ತು ಅವರಿಗೆ ಒಳ್ಳೆಯ ಮನೆ ಸಿಗದಿದ್ದರೆ, ಕಿಯಾರಾ ಮಾತ್ರ ಸಿದ್ಧಾರ್ಥ್ ಅವರ ಬಾಂದ್ರಾ ಮನೆಗೆ ಹೋಗಬಹುದು ಎಂದು ವರದಿಗಳಲ್ಲಿ ಹೇಳಲಾಗುತ್ತಿದೆ.


ಇದನ್ನೂ ಓದಿ: ನಟ ಧ್ರುವ ಸರ್ಜಾ, 'ಜೋಗಿ' ಪ್ರೇಮ್ ಹೊಸ ಚಿತ್ರಕ್ಕೆ 'KD' ಶೀರ್ಷಿಕೆ


ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್!


ಈ ಸುದ್ದಿಯಿಂದ ಅಭಿಮಾನಿಗಳು ಸಾಕಷ್ಟು ಆಘಾತಕ್ಕೊಳಗಾಗಿದ್ದಾರೆ. ಸಿದ್ಧಾರ್ಥ್ ಅವರ ಮಾಜಿ ಗೆಳತಿ ಆಲಿಯಾ ಭಟ್ ಕೂಡ ಮದುವೆಗೆ ಮೊದಲು ತಮ್ಮ ಪತಿ ರಣಬೀರ್ ಕಪೂರ್ ಅವರೊಂದಿಗೆ ಲೈನ್-ಇನ್‌ನಲ್ಲಿ ವಾಸಿಸುತ್ತಿದ್ದರು. ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಆದರೆ ಬಾಲಿವುಡ್ ಲೈಫ್‌ನ ಇತ್ತೀಚಿನ ವರದಿಯ ಪ್ರಕಾರ, ಈ ಸುದ್ದಿ ವದಂತಿಯಾಗಿದೆ. ಸಿದ್ಧಾರ್ಥ್ ಮತ್ತು ಕಿಯಾರಾ ಮದುವೆಯ ಮೊದಲು ಒಟ್ಟಿಗೆ ವಾಸಿಸಲು ಮುಂದಾಗುತ್ತಿಲ್ಲ ಎಂಬ ಮಾತೂ ಸಹ ಕೇಳಿ ಬರುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ