'ರೂಪಾಂತರ' ಗೊಂಡ ರಾಜ್ ಬಿ ಶೆಟ್ಟಿ

Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ. 

Written by - YASHODHA POOJARI | Edited by - Zee Kannada News Desk | Last Updated : Jun 27, 2024, 07:57 PM IST
  • ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ.
  • ಒಂದು ಮೊಟ್ಟೆಯ ಕಥೆ ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ.
  • ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
'ರೂಪಾಂತರ' ಗೊಂಡ ರಾಜ್ ಬಿ ಶೆಟ್ಟಿ title=

Rupantara :  ಕೆಲ ಸಿನೆಮಾಗಳು ಮನಸ್ಸಿಗೆ ಬಲು ಹತ್ತಿರ ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ, ಈ ಸಿನೆಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ' ಎಂದು ಬರೆದುಕೊಂಡಿರುವ ಆರ್.ಬಿ.ಎಸ್ ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಮತ್ತೆ ಒಂದಾದ ಮೊಟ್ಟೆ ತಂಡ
ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. 

ಇದನ್ನು ಓದಿ : ಮೀನು ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ ಯಾಕೆ ಗೊತ್ತಾ?

ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆ ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

 
 
 
 

 
 
 
 
 
 
 
 
 
 
 

A post shared by Raj B Shetty (@rajbshetty)

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ
ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂಧರ್ಭದಲ್ಲಿ ರೂಪಾಂತರ ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ

ಇದನ್ನು ಓದಿ : . Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!

ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುಧ್ಧ ಫಿಲಂಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ. ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವನಕರ್ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News