`ರೂಪಾಂತರ` ಗೊಂಡ ರಾಜ್ ಬಿ ಶೆಟ್ಟಿ
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Rupantara : ಕೆಲ ಸಿನೆಮಾಗಳು ಮನಸ್ಸಿಗೆ ಬಲು ಹತ್ತಿರ ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ, ಈ ಸಿನೆಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ' ಎಂದು ಬರೆದುಕೊಂಡಿರುವ ಆರ್.ಬಿ.ಎಸ್ ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಮತ್ತೆ ಒಂದಾದ ಮೊಟ್ಟೆ ತಂಡ
ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ.
ಇದನ್ನು ಓದಿ : ಮೀನು ತಿಂದ ನಂತರ ಹಾಲು ಕುಡಿಯುವುದು ಒಳ್ಳೆಯದಲ್ಲ ಯಾಕೆ ಗೊತ್ತಾ?
ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆ ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.
Gruha Lakshmi: ಇನ್ಮುಂದೆ ಇಂತಹ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ ಯೋಜನೆ ಹಣ!
ಟರ್ಬೋ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುಧ್ಧ ಫಿಲಂಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ. ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವನಕರ್ ಅವರು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.