Pranam Devaraj: ಯಂಗ್ ಡೈನಾಮಿಕ್  ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. 


ಇದನ್ನೂ ಓದಿ-ಬಿಗ್ ಬಾಸ್ ಸೀಸನ್‌ 10​ ಫಿನಾಲೆ ದಿನಾಂಕ ತಿಳಿಸಿದ ಕಿಚ್ಚ ಸುದೀಪ್.!


ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. 


ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.


ಇದನ್ನೂ ಓದಿ-Yash: ಕೇವಲ 1 ಚಿತ್ರದಿಂದ ಜಗತ್ತೇ ತಿರುಗಿ ನೋಡುವಂತೆ ಮಾಡಿದ.. 38 ವರ್ಷದ ಸೌತ್ ಸ್ಟಾರ್ ಈತ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.