Salaar Release In Japan: ಟಾಲಿವುಡ್‌ ಸ್ಟಾರ್‌ ಪ್ರಭಾಸ್ ಮತ್ತು ಡೈರೆಕ್ಟರ್‌ ಪ್ರಶಾಂತ್ ನೀಲ್ ನಿರ್ದೇಶನದ ‌ʻಸಲಾರ್ ಪಾರ್ಟ್‌ 1 ಸೀಜ್‌ ಫೈರ್ʼ ವಿಶ್ವದೆಲ್ಲೆಡೆ  ಸಕ್ಸಸ್‌ ಸೆಲೆಬ್ರೇಟ್‌ ಮಾಡ್ತಿದ್ದು, ಇದು  2023 ರಲ್ಲಿ ಅತಿ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಒಂದಾಗಿದೆ. ಚಿತ್ರ ರಿಲೀಸ್‌ ಆದ ಮೂರನೇ ವಾರಕ್ಕೆ ಚಿತ್ರ 700 ಕೋಟಿ ಕ್ಲಬ್ ಸೇರಿಕೊಂಡಿದೆ. ಪ್ರಭಾಸ್ ಜೊತೆ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್‌ನನ್ನು ನಿರ್ದೇಶಕ ಪ್ರಶಾಂತ್ ನೀಲ್ ಅಚ್ಚುಕಟ್ಟಾಗಿ ಬಳಸಿಕೊಂಡಿದ್ದು, ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. 


COMMERCIAL BREAK
SCROLL TO CONTINUE READING

ಸಲಾರ್‌ ಸಿನಿಮಾ 2023ರ ಡಿಸೆಂಬರ್ 22 ರಂದು ತೆರೆಕಂಡಿದ್ದ, ಈಗಾಗಲೇ ಹಲವು ದಾಖಲೆಗಳನ್ನು ಬರೆದಿದೆ. ಇದರೊಟ್ಟಿಗೆ ಈ ಚಿತ್ರ ಅಂತರಾಷ್ಟ್ರೀಯ ಭಾಷೆಯೊಂದರಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಸಲಾರ್ ಸಿನಿಮಾದ ಮೊದಲ ಭಾಗಕ್ಕೆ ಪ್ರಪಂಚಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದನ್ನು ಎನ್‌ಕ್ಯಾಚ್ ಮಾಡಿಕೊಳ್ಳುವ ತವಕದಲ್ಲಿರುವ ಚಿತ್ರತಂಡ ಮತ್ತೊಂದು ಹೆಜ್ಜೆ ಮುಂದೆ ಹೋಗುತ್ತಿದ್ದಾರೆ. ನಿನ್ನೆಯಷ್ಟೇ ಹೊಂಬಾಳೆ ಫಿಲ್ಮ್ಸ್ ಸಲಾರ್‌ ಸಿನಿಮಾ ಮಾರ್ಚ್ 7 ರಂದು ಲ್ಯಾಟಿನ್ ಅಮೆರಿಕದಲ್ಲಿ  ಸ್ಪ್ಯಾನಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಿದೆ ಎಂಬ ವಿಷಯ ಹೊರ ಬಂದಿತ್ತು. 


ಅಂತಾರಾಷ್ಟ್ರೀಯ ಭಾಷೆಯಲ್ಲಿ ಸಲಾರ್‌ ರಿಲೀಸ್:‌ ಅಮೇರಿಕಾದಲ್ಲಿ ಪ್ರಭಾಸ್‌ ಅಬ್ಬರ!


ಇದೀಗ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಈ ಬೇಸಿಗೆಯಲ್ಲಿ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಡೈರೆಕ್ಟರ್‌ ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ 'ಟ್ವಿನ್' ದ್ವೀಪ ರಾಷ್ಟ್ರದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ. ಇದೇ ವರ್ಷ ಜಪಾನ್‌ನಾದ್ಯಂತ ಸಿನಿ ಥೀಯೇಟರ್‌ಗಳಲ್ಲಿ ರಿಲೀಸ್‌ ಆಗಲಿದ್ದು, ಟ್ವಿನ್ 2 ಮೂಲಕ ಚಿತ್ರ ತೆರೆಕಾಣುತ್ತಿದೆ' ಎಂದು ಚಿತ್ರತಂಡ ಶನಿವಾರ 'ಸಲಾರ್'ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.


ಸದ್ಯ ಸಲಾರ್ ಚಿತ್ರವನ್ನು  ಸ್ಪ್ಯಾನಿಷ್  ಆವೃತ್ತಿಯನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ನೋಡಬೇಕಾಗಿರುವುದರ ಜೊತೆಗೆ, ಜಾಪಾನ್‌  ಆವೃತ್ತಿಯಲ್ಲಿ ಸಿನಿರಸಿಕರು  ಚಿತ್ರವನ್ನು ಯಾವ ರೀತಿ ಸ್ವೀಕರಿಸುತ್ತಾರೆಂದು ಕಾದು ನೋಡಬೇಕಾಗಿದೆ. ಸಲಾರ್ ಸಿನಿಮಾದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಜೊತೆಗೆ, ಚಿತ್ರದಲ್ಲಿ ಶೃತಿ ಹಾಸನ್, ಶ್ರೀಯಾ ರೆಡ್ಡಿ, ಬಾಬಿ ಸಿಂಹ, ಜಗಪತಿ ಬಾಬು, ದೇವರಾಜ್, ಪ್ರಮೋದ್, ನವೀನ್ ಶಂಕರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ. ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.