Salman Khan Viral Video: ಸಲ್ಮಾನ್ ಖಾನ್ ಅವರ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈದ್ ವಿಶೇಷ ಸಂದರ್ಭದಲ್ಲಿ, ಭಾಯಿಜಾನ್ ತಮ್ಮ ಮನೆಯ ಬಾಲ್ಕನಿಯಲ್ಲಿ ತಮ್ಮ ಅಭಿಮಾನಿಗಳನ್ನು ಭೇಟಿಯಾದರು. ಭಾಯಿಜಾನ್ ತಮ್ಮ ಅಭಿಮಾನಿಗಳತ್ತ ಕೈ ಬೀಸಿದರು. ಈ ವರ್ಷದ ಈದ್, ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದೆ. ಇದಲ್ಲದೆ, ನಟನ ಮುಂಬರುವ ಚಿತ್ರ ಟೈಗರ್ 3 ಬಗ್ಗೆ ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಜೊತೆ ಕತ್ರಿನಾ ಕೈಫ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸಲ್ಮಾನ್ ಅಭಿನಯದ ಟೈಗರ್ 3 ಚಿತ್ರದ ವಿಡಿಯೋ ಈದ್ ದಿನದಂದು ಲೀಕ್ ಆಗಿತ್ತು. ನಟನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತು.


COMMERCIAL BREAK
SCROLL TO CONTINUE READING

ಇದೀಗ ಸಲ್ಮಾನ್‌ ಖಾನ್‌ ಶೂಟಿಂಗ್‌ ಸೆಟ್‌ನಲ್ಲಿ ಕುಳಿತು ಸಿಗರೇಟ್ ಸೇದುತ್ತಿರುವ ದೃಶ್ಯ ವೈರಲ್‌ ಆಗಿದೆ. ಕಪ್ಪು ಕುರ್ತಾ-ಪೈಜಮಾದಲ್ಲಿ ನಟ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ. ಸಲ್ಮಾನ್ ಅವರನ್ನು ಅವಿನಾಶ್ ಸಿಂಗ್ ರಾಥೋಡ್ ಆಗಿ ನೋಡಲು ಅಭಿಮಾನಿಗಳು ಸಾಕಷ್ಟು ಉತ್ಸುಕರಾಗಿದ್ದಾರೆ. ಈ ವೈರಲ್ ವಿಡಿಯೋಗೆ ಅಭಿಮಾನಿಗಳು ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.  


ಇದನ್ನೂ ಓದಿ: Upasana baby shower: ರಾಮ್ ಚರಣ್ ಪತ್ನಿ ಉಪಾಸನಾ ಸೀಮಂತದಲ್ಲಿ ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ!


ನಟನ ಚಿತ್ರದ ಟೀಸರ್ ಅನ್ನು ಪಠಾಣ್ ಬಿಡುಗಡೆಯ ಸಮಯದಲ್ಲಿ ರಿಲೀಸ್‌ ಮಾಡಲಾಯಿತು. ಟೈಗರ್ 3 ಈ ವರ್ಷ ದೀಪಾವಳಿಗೆ ಬಿಡುಗಡೆಯಾಗಲಿದೆ. ಟೈಗರ್ 3 ಚಿತ್ರದಲ್ಲಿ ಸಲ್ಮಾನ್ ಜೊತೆಗೆ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಠಾಣ್ ಚಿತ್ರದಲ್ಲಿ ಸಲ್ಮಾನ್ ಅತಿಥಿ ಪಾತ್ರ ಮಾಡಿದ್ದರು. ಇಬ್ಬರೂ ಸೂಪರ್‌ಸ್ಟಾರ್‌ಗಳನ್ನು ಮತ್ತೊಮ್ಮೆ ಒಟ್ಟಿಗೆ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.


 


ರಾಜ್‌ - ವಿಷ್ಣು ಪೈಪೋಟಿಯಲ್ಲಿ ಅಂಬರೀಷ್‌ ಪಾಲಾಯ್ತಂತೆ ಈ ಸೂಪರ್‌ ಹಿಟ್‌ ಸಿನಿಮಾ!?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ