Samantha Latest News: ಸಮಂತಾ ಇತ್ತೀಚೆಗಷ್ಟೇ ಯೂಟ್ಯೂಬ್ ಪಾಡ್‌ಕಾಸ್ಟ್‌ನಲ್ಲಿ ಕೆಲವು ಆರೋಗ್ಯ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಟೇಕ್ 20: ಹೆಲ್ತ್ ಪಾಡ್‌ಕಾಸ್ಟ್ ಸರಣಿಯ ಮೊದಲ ಸಂಚಿಕೆಯನ್ನು 3 ವಾರಗಳ ಹಿಂದೆ ಫೆಬ್ರವರಿ 19 ರಂದು ಬಿಡುಗಡೆ ಮಾಡಲಾಯಿತು. ಇದರಲ್ಲಿ ಸಮಂತಾ ಅವರ ಕೆಲವು ಹೇಳಿಕೆಗಳ ಬಗ್ಗೆ ಓರ್ವ ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಈ ಬಗ್ಗೆ ಅವರು ಪೋಸ್ಟ್ ಮಾಡಿದ್ದಾರೆ. ಇವರೊಬ್ಬ ವೈದ್ಯರು ಎಂದು ಹೇಳಲಾಗಿದೆ. ನಟಿ ಸಮಂತಾ ತನ್ನ 33 ಮಿಲಿಯನ್ ಫಾಲೋವರ್ಸ್ ಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಯಕೃತ್ತಿನ ಆರೋಗ್ಯಕ್ಕೆ ದಂಡೇಲಿಯನ್ ಮೂಲಿಕೆ ಅತ್ಯುತ್ತಮ ಔಷಧ ಎಂದು ಆ ಪಾಡ್‌ಕಾಸ್ಟ್‌ನಲ್ಲಿ ಚರ್ಚಿಸುವುದು ಸೂಕ್ತವಲ್ಲ. ಅರಿವಿಲ್ಲದೆ ಅನುಯಾಯಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವೈದ್ಯರು ತಮ್ಮ ಪೋಸ್ಟ್ ಮೂಲಕ ಸಮಂತಾ ಮೇಲೆ ಆರೋಪ ಮಾಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮಯೋಸಿಟಿಸ್ ನಿಂದ ಬಳಲುತ್ತಿದ್ದ ಸ್ಯಾಮ್ ಸಿನಿಮಾ ಕೆಲಸದಿಂದ ಸ್ವಲ್ಪ ಕಾಲ ವಿರಾಮ ತೆಗೆದುಕೊಂಡರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರಂತೆ ಎನ್ನಲಾಗಿದೆ.
ಸಮಂತಾ ಸೌತ್ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಿನಿಮಾ ಲೋಕದಲ್ಲಿ ಲಕ್ಷಾಂತರ ಫಾಲೋವರ್ಸ್ ಇದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ನಟಿಸುತ್ತಲೇ ಫಿಟ್ ನೆಸ್ ಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಅಣ್ಣಾಮಲೈ ಅಭಿನಯದ 'ಅರಬ್ಬೀ' ಟ್ರೈಲರ್ ಬಿಡುಗಡೆ: ಕೈಗಳಿಲ್ಲದೆ ಈಜಿ ಗೆದ್ದ ಸಾಧಕನ ಕತೆ..!
ಸಮಂತಾ 'ದಿ ಫ್ಯಾಮಿಲಿ ಮ್ಯಾನ್ 2' ಸರಣಿಯೊಂದಿಗೆ OTT ಪ್ರವೇಶಿಸಿದರು. ಸ್ಯಾಮ್ ಈಗ OTT ಗಳಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಾಯಕಿ. ಸಮಂತಾ ಪ್ರತಿ ಸರಣಿಗೆ 10 ಕೋಟಿ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ.
ಅನಾರೋಗ್ಯದ ಕಾರಣ ನಟನೆಯಿಂದ ವಿರಾಮ ಪಡೆದಿರುವ ಜನಪ್ರಿಯ ನಾಯಕಿ ಸಮಂತಾ ಶೀಘ್ರದಲ್ಲೇ ವರುಣ್ ಧವನ್ ಜೊತೆಗಿನ ಸಿಟಾಡೆಲ್ ಇಂಡಿಯಾ ಸರಣಿಯ ಮೂಲಕ ರಿಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ.
ವೈದ್ಯರ ಟೀಕೆಗೆ ನಟಿ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ನೆಟಿಜನ್‌ಗಳು ಕಾತುರದಿಂದ ಕಾಯುತ್ತಿದ್ದಾರೆ. ಕೆಲವರು ಆಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಕೂಡ ಮಾಡುತ್ತಿದ್ದಾರೆ.
ಇದನ್ನೂ ಓದಿ: Tukali Santhosh : ಬಿಗ್ ಬಾಸ್ ತುಕಾಲಿ ಸಂತೋಷ್ ಕಾರು ಅಪಘಾತ.!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.