ವಿಜಯ್- ಸಮಂತಾ ʼಖುಷಿʼ ಸಿನಿಮಾ ರಿಲೀಸ್‌ಗೆ ದಿನಗಣನೆ..! ಸೆಪ್ಟಂಬರ್ 1ಕ್ಕೆ ಚಿತ್ರ ಬಿಡುಗಡೆ

Samantha Vijay devarakonda movie : ಬಹುನಿರೀಕ್ಷಿತ ʼಖುಷಿʼ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಟ್ರೈಲರ್‌ ಮತ್ತು ಹಾಡುಗಳಿಂದ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಚಿತ್ರ ಸೆಪ್ಟಂಬರ್‌ 1ಕ್ಕೆ ವಿಶ್ವದಾದ್ಯಂತ ಚಿತ್ರಮದಿರಗಳಲ್ಲಿ ತೆರೆ ಕಾಣಲಿದೆ.

Written by - YASHODHA POOJARI | Edited by - Krishna N K | Last Updated : Aug 30, 2023, 02:12 PM IST
  • ಬಹುನಿರೀಕ್ಷಿತ ʼಖುಷಿʼ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರು.
  • ಸೆಪ್ಟಂಬರ್ 1ಕ್ಕೆ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.
  • ಸಮಂತಾ ವಿಜಯ್‌ ದೇವರಕೊಂಡ ನಟನೆಯ ಖುಷಿ ಸಿನಿಮಾ.
ವಿಜಯ್- ಸಮಂತಾ ʼಖುಷಿʼ ಸಿನಿಮಾ ರಿಲೀಸ್‌ಗೆ ದಿನಗಣನೆ..! ಸೆಪ್ಟಂಬರ್ 1ಕ್ಕೆ ಚಿತ್ರ ಬಿಡುಗಡೆ title=

Kushi movie : ಸಮಂತಾ ಹಾಗೂ ವಿಜಯ್ ದೇವರಕೊಂಡ ನಟನೆಯ ಖುಷಿ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಸೆಪ್ಟಂಬರ್ 1ಕ್ಕೆ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೇಲರ್ ಹಾಗೂ ಹಾಡುಗಳಿಗೆ ಭರಪೂರ ಮೆಚ್ಚುಗೆ ಸಿಕ್ಕಿದೆ. ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. 

'ಖುಷಿ' ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ರಿಲೀಸ್ ಆಗಲಿದೆ. ಮೈತ್ರಿ ಮೂವಿ ಬ್ಯಾನರ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಸಮಂತಾ ಹಾಗೂ ನಾಗಚೈತನ್ಯ ನಟಿಸಿದ್ದ 'ಮಜಿಲಿ' ಸಿನಿಮಾದ ನಿರ್ದೇಶಕ ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: ಕೈ ಮೇಲೆ ಕೈ...! ರಶ್ಮಿಕಾ - ವಿಜಯ್‌ ದೇವರಕೊಂಡ ಮದುವೆ ಫಿಕ್ಸ್‌..? ಶಿಘ್ರದಲ್ಲೇ ಅನೌನ್ಸ್‌..

ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ 'ಖುಷಿ' ಸಿನಿಮಾದಲ್ಲಿ ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವೆನ್ನೆಲಾ ಕಿಶೋರ್, ರೋಹಿಣಿ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹೇಷಾಂ ಅಬ್ದುಲ್ ವಹಾಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ. ಸಾಲು ಸಾಲು ಸೋಲು ಕಂಡಿರುವ ವಿಜಯ್ ದೇವರಕೊಂಡಗೆ ಖುಇಷಿ ಸಕ್ಸಸ್ ಕೊಡಲಿದೆ ಎಂಬ ನಿರೀಕ್ಷೆ ಹೆಚ್ಚಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News