Kushi film : ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಬಹುನಿರೀಕ್ಷಿತ ಖುಷಿ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಪ್ರೇಮಗೀತೆ ಇದಾಗಿದ್ದು, ಸ್ಯಾಮ್ ಹಾಗೂ ವಿಜಯ್ ಕೆಮಿಸ್ಟ್ರೀ ನೋಡುಗರ ಗಮನಸೆಳೆಯುತ್ತಿದೆ.
ಕನ್ನಡದಲ್ಲಿಯೂ ಅನಾವಣಗೊಂಡಿರುವ ಖುಷಿ ಸಿನಿಮಾದ ಹಾಡಿಗೆ ಆರಾಧ್ಯ ಸಿಂಗಿಂಗ್ ಮಸ್ತಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರಿಚರಣ್ ಹಾಗೂ ಚಿನ್ಮಯಿ ಶ್ರೀಪಾದ್ ಧ್ವನಿಯಾಗಿದ್ದಾರೆ. ಹೇಶಾಮ್ ಅಬ್ದುಲ್ ವಹಾಬ್ ಟ್ಯೂನ್ ಹಾಕಿದ್ದಾರೆ. ಈಗಾಗ್ಲೇ ರಿಲೀಸ್ ಆಗಿದೆ ನನ್ನ ರೋಜಾ ನೀನೇ ಎಂಬ ಹಾಡಿಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದ್ದು, ಈಗ ಆರಾಧ್ಯ ಗೀತೆಯ ಸರದಿ.
ಇದನ್ನೂ ಓದಿ: ʼನಾನಿʼ 30ನೇ ಸಿನಿಮಾಗೆ ಟೈಟಲ್ ಫಿಕ್ಸ್...! ಅಪ್ಪ-ಮಗಳ ಎಮೋಷನ್ ಜರ್ನಿಗೆ ಮೃಣಾಲ್ ನಾಯಕಿ
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನರ್ವಣ ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.