Samarjith Lankesh: ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಗೌರಿ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಇವಾಗಲೇ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರುವ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಚಿತ್ರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದರೀಗ ಆ ಕುತುಹಲಕ್ಕೆ ತೆರೆ ಬಿದ್ದಿದೆ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಅವರ ಪುತ್ರ ಸಮರ್ಜಿತ್ ಮತ್ತು ನಟಿ ಸಾನಿಯಾ ಅಭಿನಯದ ಮೊದಲ ಸಿನಿಮಾವಿದು. ಇಂದಿ ಸಿನಿಮಾ ತಂಡ  ಮಾಧ್ಯಮದ ಮುಂದೆ ಹಾಜರಾಗುವ ಮೂಲಕ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಗೌರಿ ಸಿನಿಮಾ ವಿಶೇಷ ದಿನದಂದು ತೆರೆಗೆ ಬರಲಿದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಹೌದು 'ಗೌರಿ' ಸಿನಿಮಾ ಆಗಸ್ಟ್ 15 ಸ್ವಾತಂತ್ರ್ಯಾ ದಿನಾಚರಣೆಗೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಗೌರಿ ತಂಡ ಇಂದು ಕಾಲೇಜಿನಲ್ಲಿ ಕಾರ್ಯಕ್ರಮ ಮಾಡುವ‌ ಮೂಲಕ ಅದ್ದೂರಿಯಾಗಿ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಬೆಂಗಳೂರಿನ MES ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿಮಾತಂಡ 'ಗೌರಿ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಕುಣಿದು ಕುಪ್ಪಳಿಸಿದ್ದ ಸಿನಿಮಾ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. 


ಇದನ್ನೂ ಓದಿ : ದರ್ಶನ್ ಒಳ್ಳೆಯವರು, ಅವರು ನಿರಪರಾಧಿಯಾಗಿ ಹೊರಬರುತ್ತಾರೆ..! ನಟ ನಾಗ ಶೌರ್ಯ


ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ 'ಕನ್ನಡದ ಯುವ ಪ್ರತಿಭೆಗಳನ್ನು ಬೆಳಸಿ. ಆಗಸ್ಟ್ 15 ಒಳ್ಳೆಯ ದಿನ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಇದು. ಎಲ್ಲಾ ಸಿನಿಮಾಗಳು ಕನ್ನಡ ಸಿನಿಮಾಗಳೇ ಪ್ರೋತ್ಸಾಹಿಸಬೇಕು'ಎಂದರು.


ಕನಸು ನನಸಾದ ಸಮಯಚಿದು. ನನ್ನ ಮೊದಲ ಸಿನಿಮಾವನ್ನು ಎಲ್ಲರೂ ನೋಡಿ ಎಂದರು. ಈಗಾಗಲೇ ಸಿನಿಮಾದಿಂದ ವೈರಲ್ ಆಗಿರುವ 'ಟೈಮ್ ಬರುತ್ತೆ...' ಮತ್ತು ಧೂಳ್ ಎಬ್ಬಿಸಾವ...ಹಾಡಿಗೆ ವಿದ್ಯಾರ್ಥಿಗಳ ಜೊತೆ ಸಮರ್ಥಿಜ್ ಲಂಕೇಶ್ ಮತ್ತು ನಾಯಕಿ ಸಾನ್ಯಾ ಅಯ್ಯರ್ ಡಾನ್ಸ್ ಮಾಡಿ ಸಂಭ್ರಮಿಸಿದರು. ನಿಮ್ಮ ತಂಡದ ಖುಷಿಗೆ ಮತ್ತಷ್ಟು ಜೊಷ್ ತುಂಬಿದರು ವಿದ್ಯಾರ್ಥಿಗಳು.


ಇದನ್ನೂ ಓದಿ: ನಟ ಪ್ರಭಾಸ್ ಮೊದಲ ಸಿನಿಮಾದ ಸಂಭಾವನೆ ಎಷ್ಟು ಗೊತ್ತೆ..? ತಿಳಿದ್ರೆ ಇಷ್ಟೇನಾ ಅಂತೀರಾ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.