ಮೈಸೂರಲ್ಲಿ ‘ಸಂಭವಾಮಿ ಯುಗೇ ಯುಗೇ’: ಜೂನ್ 21ರಂದು ಸಿನಿಮಾ ಬಿಡುಗಡೆ

Sandalwood Updates: ಜಯ್ ಶೆಟ್ಟಿ, ನಿಶಾ ರಜಪೂತ್ ಹಾಗೂ ಮಧುರಾ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜೊತೆ ಮಾತನಾಡಿತು.

Written by - YASHODHA POOJARI | Last Updated : Jun 9, 2024, 09:51 PM IST
    • ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ
    • ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ
    • ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ
ಮೈಸೂರಲ್ಲಿ  ‘ಸಂಭವಾಮಿ ಯುಗೇ ಯುಗೇ’: ಜೂನ್ 21ರಂದು ಸಿನಿಮಾ ಬಿಡುಗಡೆ title=
Sambhawami Yuge Yuge

Sandalwood Updates: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು,  ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು  ಬಿಡುಗಡೆಯಾಗಲಿದೆ.

ಜಯ್ ಶೆಟ್ಟಿ, ನಿಶಾ ರಜಪೂತ್ ಹಾಗೂ ಮಧುರಾ ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಅರಮನೆಗಳ ನಗರ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜೊತೆ ಮಾತನಾಡಿತು.

ಇದನ್ನೂ ಓದಿ: ‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ

ತಮ್ಮ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಕುರಿತಂತೆ ಮಾತನಾಡಿದ ಚೇತನ್ ಚಂದ್ರಶೇಖರ್ ಶೆಟ್ಟಿ,  ನಾನು ಕಳೆದ  ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ  ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ  ವಿಭಿನ್ನ  ಕಮರ್ಷಿಯಲ್  ಕಾನ್ಸೆಪ್ಟ್ ಇರುವ ಈ ಚಿತ್ರಕ್ಕೆ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳೂ ಇವೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡುತ್ತಿದ್ದೇವೆ.

ಹಳ್ಳಿಯ ಹುಡುಗರು ವಿದ್ಯಾವಂತರಾದ ಮೇಲೆ, ಕೆಲಸದ ನಿಮಿತ್ತ ಪಟ್ಟಣಕ್ಕೆ ಅಂತ ಹೋದವರು ಅಲ್ಲೇ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು ? ನಮ್ಮ ಹಳ್ಳಿಗಳು ಉಳಿಯುವುದಾದರೂ ಹೇಗೆ ?, ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲೆಸಬೇಕು, ಹಳ್ಳಿಗಳನ್ನು ಬೆಳೆಸಬೇಕು ಎಂಬ ಕಥಾಹಂದರದ ಮೇಲೆ ಈ ಚಿತ್ರ ಮಾಡಿದ್ದೇವೆ. ಜೂನ್ 21ಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ.  ಕಮರ್ಷಿಯಲ್ ಚಿತ್ರವಾದರೂ, ಇವತ್ತಿನ ತಲೆಮಾರಿನವರಿಗೆ  ಕನೆಕ್ಟ್ ಆಗುವಂಥ ಹಲವಾರು  ಅಂಶಗಳು ನಮ್ಮ ಚಿತ್ರದಲ್ಲಿವೆ ಎಂದು ಹೇಳಿದರು.

ನಾಯಕ ಜಯ್‌ ಶೆಟ್ಟಿ ಮಾತನಾಡಿ ಈ ಹಿಂದೆ 1975 ಎಂಬ ಚಿತ್ರದಲ್ಲಿ ಅಭಿನಯಿಸಿದ್ದೆ. ಕೃಷಿ ಮತ್ತು ರೈತರ ಮೇಲೆ ಮಾಡಿದ ಚಿತ್ರವಿದು, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ.  ಮುಂದೇನಾಗುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್  ಎಂದರು.

ನಾಯಕಿ ನಿಶಾ ರಜಪೂತ್ ಮಾತನಾಡುತ್ತ ನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ  ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು, ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ ಮಾತನಾಡಿ ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ ಎಂದು ತನ್ನ‌ ಪಾತ್ರದ ಕುರಿತು ಹೇಳಿಕೊಂಡರು. ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ,  ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಸದ್ಯಕ್ಕೆ ಇಂಡಸ್ಟ್ರಿಯನ್ನು ನಡುಗಿಸುತ್ತಿರೋ ಈ ಇಬ್ಬರು ನಟರು, ಚೆನ್ನೈನಲ್ಲಿರುವಾಗ ಮಹೇಶ ಬಾಬು ಕ್ಲಾಸಮೇಟ್ಸ್ ಅಂತೆ !

ಉಳಿದಂತೆ ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ ಹಾಸನ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದು ತಮ್ಮ ಪಾತ್ರಗಳ‌ ಕುರಿತು ಮಾತನಾಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News