ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರ ವಿರುದ್ಧ ಟ್ವೀಟ್.. ನಟ ಚೇತನ್ ಅರೆಸ್ಟ್
Actor Chetan Arrest: ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ ಅವರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಹಿಜಾಬ್ ಪ್ರಕರಣದ (Hijab Row) ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಟ್ವೀಟ್ ಮಾಡಿದ್ದ ಕನ್ನಡ ಚಿತ್ರರಂಗದ ನಟ ಚೇತನ್ ಕುಮಾರ್ (Chetan Kumar) ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: 47 ಮಿಲಿಯನ್ ವ್ಯೂವ್ ಪಡೆದ 'ಬಚ್ಚನ್ ಪಾಂಡೆ' ಟ್ರೈಲರ್.. ಅಕ್ಷಯ್ ಕುಮಾರ್ ಅವತಾರಕ್ಕೆ ಫ್ಯಾನ್ಸ್ ಫುಲ್ ಫಿದಾ
ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ಕನ್ನಡ ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸ (Chetan) ಅವರನ್ನು ಬೆಂಗಳೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 505(2) ಮತ್ತು 504 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.
ನಟ ಚೇತನ್ ಕುಮಾರ್ ಟ್ವೀಟ್ ಆಧರಿಸಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಮಾಹಿತಿಯ ಪ್ರಕಾರ, ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಚೇತನ್ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಚೇತನ್ ಅವರ ಪತ್ನಿ ಮೇಘಾ (Megha) ತಮ್ಮ ಪತಿಯನ್ನು ಕೆಲವು ಪೊಲೀಸ್ ಅಧಿಕಾರಿಗಳು ಕರೆದೊಯ್ದ ನಂತರ "ನಾಪತ್ತೆಯಾಗಿದ್ದಾರೆ" ಎಂದು ಆರೋಪಿಸಿದ್ದರು.
ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಸ್ವತಃ ಲೈವ್‌ಗೆ ಹೋದ ಮೇಘಾ, ಯಾವುದೇ ಪೂರ್ವ ಸೂಚನೆ ಅಥವಾ ಕಾನೂನು ಸೂಚನೆ ನೀಡದೆ, ಚೇತನ್‌ನನ್ನು ತಮ್ಮ ಮನೆಯಿಂದ ಕರೆದೊಯ್ಯಲಾಯಿತು ಮತ್ತು ಈಗ ಅವರು ಎಲ್ಲಿದ್ದಾರೆಂಬುದು ತಿಳಿದಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆ ಮದುವೆ! ಈ ಬಗ್ಗೆ ನಟ ವಿಜಯ್ ದೇವರಕೊಂಡ ಮೊದಲ ಪ್ರತಿಕ್ರಿಯೆ..
ಚೇತನ್ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲೂ ವಿಚಾರಿಸಿದ್ದೇವೆ. ಅವರು ಚೇತನ್ ತಮ್ಮ ವಶದಲ್ಲಿಲ್ಲ, ವಿಚಾರಣೆಗಾಗಿ ಬೇರೆಡೆ ಕರೆದೊಯ್ದಿದ್ದಾರೆ ಎಂದಿದ್ದಾರೆ. ಇದು ಒಂದು ರೀತಿಯ ಅಪಹರಣ (Kidnap) ಎಂದು ಚೇತನ್ ಪತ್ನಿ ಮೇಘಾ ಆರೋಪಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.