ಕೂಡಿ ಬಂತು ಕಲ್ಯಾಣ.. ಕೊನೆಗೂ ಡಾಲಿ ಧನಂಜಯ್ ಮದುವೆ ಫಿಕ್ಸ್! ಇವರೇ ನೋಡಿ ಹುಡ್ಗಿ!!

Daali Dhananjay Marriage: ಕನ್ನಡದ ನಟ ಡಾಲಿ ಧನಂಜಯ್‌ ಯಾವಾಗ ಮದುವೆಯಾಗುತ್ತಾರೆ ಎನ್ನುವ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದ್ದವು.. ಇದೀಗ ಆ ಶುಭ ಘಳಿಗೆ ಬಂದೇ ಬಿಟ್ಟಿದೆ.. 

Written by - Savita M B | Last Updated : Nov 1, 2024, 09:20 AM IST
  • ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ
  • ಧನಂದಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಕೂಡಿ ಬಂತು ಕಲ್ಯಾಣ.. ಕೊನೆಗೂ ಡಾಲಿ ಧನಂಜಯ್ ಮದುವೆ ಫಿಕ್ಸ್! ಇವರೇ ನೋಡಿ ಹುಡ್ಗಿ!!

Daali Dhananjay: ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಯಾವಾಗಲೂ ಎದುರಾಗುತ್ತಿತ್ತು. ಹೋದಲ್ಲಿ ಬಂದಲ್ಲಿ ಡಾಲಿಗೆ ಮದುವೆ ಬಗ್ಗೆ ಪ್ರಶ್ನೆ ಕೇಳ್ತಿದ್ರು. ಇದೀಗ ಆ ಪ್ರಶ್ನೆಗೆ ಡಾಲಿ ಧನಂಜಯ ಕಡೆಯಿಂದ ಉತ್ತರ ಸಿಕ್ಕಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂದಯ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 

Add Zee News as a Preferred Source

ಡಾಲಿ ಯಾರನ್ನು ಮದುವೆಯಾಗುತ್ತಾರೆ, ಚಿತ್ರರಂಗದವರಾ ಅಥವಾ ಬೇರೆ ಕ್ಷೇತ್ರದವರನ್ನು ಮದುವೆಯಾಗುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲಿತ್ತು. ಇದೀಗ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಧನಂಜಯ ವೈದ್ಯೆಯನ್ನು ಕೈ ಹಿಡಿಯುತ್ತಿದ್ದಾರೆ.  ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನತ್ಯಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ಕೈ ಹಿಡಿಯುತ್ತಿದ್ದಾರೆ. 

ಇದನ್ನೂ ಓದಿ-ದೀಪಾವಳಿಗೆ ಹೊರಬಂದೇ ಬಿಟ್ಟರು ದಾಸ.. ನಟ ದರ್ಶನ್‌ಗೆ ಮಧ್ಯಂತರ ಜಾಮೀನು! ಫ್ಯಾನ್ಸ್‌ ಫುಲ್‌ ಖುಷ್‌

ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಜೋಡಿ ಸುಂದರವಾಗಿ ಕಾಣಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ ಧನಂಜಯ. 

ಅಂದಹಾಗೆ ಇಬ್ಬರ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಎಮೋಷನಲಿ ಕನೆಕ್ಟ್ ಆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ-ಭವ್ಯ ಬಂಗಲೆ.. ಐಷಾರಾಮಿ ಕಾರು, ಪ್ರೊಡಕ್ಷನ್‌ ಹೌಸ್.. ಅಶ್ವಿನಿ ಪುನೀತ್‌ ರಾಜಕುಮಾರ್‌ ಹೆಸರಿನಲ್ಲಿರುವ ಒಟ್ಟು ಆಸ್ತಿ ಎಷ್ಟು?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Savita M B

ಸವಿತಾ ಎಂ.ಬಿ ಅವರು ZEE ಕನ್ನಡ ನ್ಯೂಸ್‌ ಡಿಜಿಟಲ್‌ನಲ್ಲಿ ಸಬ್‌ ಎಡಿಟರ್‌ ಆಗಿ ಕೆಲಸ ಮಾಡುತ್ತಿದ್ದು, ಎಂಟರ್‌ಟೈನ್‌ಮೆಂಟ್, ಹೆಲ್ತ್‌, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. 2023ರಿಂದ ಇವರು ವಾಹಿನಿಗಾಗಿ ಶ್ರಮಿಸುತ್ತಿದ್ದಾರೆ.

...Read More

Trending News