Breaking News: ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ನಟ ಪುನೀತ್ ರಾಜ್ ಕುಮಾರ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Written by - Zee Kannada News Desk | Last Updated : Oct 29, 2021, 12:54 PM IST
  • ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ
  • ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಪವರ್ ಸ್ಟಾರ್ ಗೆ ಚಿಕಿತ್ಸೆ
  • ಐಸಿಯುನಲ್ಲಿ ಪುನೀತ್ ರಾಜ್ ಕುಮಾರ್ ಗೆ ಚಕಿತ್ಸೆ ನೀಡಲಾಗುತ್ತಿದೆ
Breaking News: ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ  title=
ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Puneeth Rajkumar) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ನಟ ಪುನೀತ್ ರಾಜ್ ಕುಮಾರ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಶುಕ್ರವಾರ ಜಿಮ್(Gym)ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರು ಅವರಿಗೆ ಇಸಿಜಿ ಸೇರಿದಂತೆ ಇನ್ನಿತರ ಪರೀಕ್ಷೆಗಳನ್ನು ಮಾಡುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ.  

ನಟ ಪುನೀತ್ ರಾಜ್ ಕುಮಾರ್(Puneeth Rajkumar) ಆರೋಗ್ಯ ಸ್ಥಿತಿ ಗಂಭೀರವೆನ್ನುವ ಸುದ್ದಿ ತಿಳಿದು ಅಭಿಮಾನಿಗಳ ದಂಡು ಆಸ್ಪತ್ರೆಯತ್ತ ದೌಡಾಯಿಸಿದೆ. ‘ಭಜರಂಗಿ-2’ ಸಿನಿಮಾ ವೀಕ್ಷಿಸುತ್ತಿದ್ದ ಶಿವರಾಜ್ ಕುಮಾರ್ ಮತ್ತು ಕುಟುಂಬಸ್ಥರು ಕೂಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಮನೆಯ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಪುನೀತ್ ಅನಾರೋಗ್ಯ ಸುದ್ದಿ ತಿಳಿದು ಹಿರಿಯ ನಟ ವಿ.ರವಿಚಂದ್ರನ್ ಸೇರಿದಂತೆ ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು ಹಾಗೂ ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. 

ವಿಕ್ರಂ ಆಸ್ಪತ್ರೆಗೆ ಸಿಎಂ ಭೇಟಿ

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ  ಎಂದು ತಿಳಿದುಬಂದಿದೆ. ವಿಕ್ರಂ ಆಸ್ಪತ್ರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದು, ನಟನ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಐಸಿಯುನಲ್ಲಿ ನಟನಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಜಿಮ್ ಮಾಡುವ ವೇಳೆ ಅಸ್ವಸ್ಥರಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ಮೊದಲು ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News