ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ

ಶಿವರಾಂ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಇಹ ಲೋಕ ತ್ಯಜಿಸಿದ್ದಾರೆ. 

Written by - Ranjitha R K | Last Updated : Dec 4, 2021, 03:43 PM IST
  • ಹಿರಿಯ ಚಿತ್ರ ನಟ ಶಿವರಾಂ ವಿಧಿ ವಶ
  • ಅನಾರೋಗ್ಯದಿಂದ ಬಳಲುತ್ತಿದ್ದ ಶಿವರಾಂ
  • ಶಿವರಾಂ ನಿಧಾನಕ್ಕೆ ಗಣ್ಯರ ಕಂಬನಿ
ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ  title=
ನಟ ಶಿವರಾಂ ವಿಧಿ ವಶ (photo twitter)

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (Shivaram death) ನಿಧನರಾಗಿದ್ದಾರೆ. ಅವರಿಗೆ ೮೪ ವರ್ಷ  ವಯಸಾಗಿತ್ತು.  ಇತ್ತೀಚೆಗೆ ಅಪಘಾತಕ್ಕೊಳಗಾಗಿದ್ದರು. ಇದಾದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ, ಇತ್ತೀಚಿಗೆ ಮತ್ತೆ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು ಅವರನ್ನು ಆಸ್ಪತೆಗೆ ದಾಖಲಿಸಲಾಗಿತ್ತು. ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಇಹ ಲೋಕ ತ್ಯಜಿಸಿದ್ದಾರೆ. 
 
ಶಿವರಾಂ (Shivaram) ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವರಾಮ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ ಅವರ ಪುತ್ರ ಲಕ್ಷ್ಮೀಶ್, ಶಿವರಾಮ್ ಅವರಿಗೆ ಆಸ್ಪತ್ರೆಯ ವತಿಯಿಂದ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದೆ. ಆದರು ಅವರನ್ನು ಉಳಿಸಿಕೊಳ್ಳುವುದು ಸಾಧ್ಯವಾಗಿಲ್ಲ ಎಂದಿದ್ದಾರೆ.   

ಇದನ್ನೂ ಓದಿ : ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಅಮೂಲ್ಯ.. Baby bump ಪೋಟೋ ಹಂಚಿಕೊಂಡ ತಾರೆ

ಶಿವರಾಂ ನಿಧನಕ್ಕೆ ಕನ್ನಡ ಚಿತ್ರರಂಗ (Sandalwood) ಕಂಬನಿ ಮಿಡಿದಿದೆ. ಇದೆ ವೇಳೆ,  ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ  ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)  ಟ್ವೀಟ್ ಮಾಡಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸಿದ್ದಾರೆ. 

 

ಮತ್ತೊಂದೆಡೆ, ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಬೇಸರ ವ್ಯಕ್ತ ಪಡಿಸಿದ್ದಾರೆ. 

 

ಇದನ್ನೂ ಓದಿ : Vicky Kaushal-Katrina Kaif ಮದುವೆಗೆ ಹಾಜರಾಗುವುದಿಲ್ಲ ಎಂದು ಹೇಳಿದ ಗಜರಾಜ್ ರಾವ್..!

ಶಿವರಾಂ ಕನ್ನಡದ ಅನೇಕ ಚಿತ್ರಗಳಲ್ಲಿ(kannada films)  ನಟಿಸಿದ್ದು, ಹಲವಾರು ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಚಲನಚಿತ್ರಗಳು ಮಾತ್ರವಲ್ಲದೆ, ಅನೇಕ ಧಾರಾವಾಹಿಗಳಲ್ಲೂ ನಟಿಸಿದ್ದರು. ನಟನೆ ಮಾತ್ರವಲ್ಲದೆ, ಚಿತ್ರ ನಿರ್ಮಾಣದಲ್ಲೂ ತಮ್ಮ ಕೊಡುಗೆ ನೀಡಿದ್ದರು. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News