Ravichandran: ನಟ ವಿ.ರವಿಚಂದ್ರನ್ ತಾಯಿ ನಿಧನ
Ravichandran:ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ವಿಧಿವಶರಾಗಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅವರ ತಾಯಿ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: Shruti Hassan ಗೆ ತಗುಲಿದ ಕೊರೊನಾ ಸೋಂಕು, ಮನೆಯಲ್ಲಿಯೇ ಚಿಕಿತ್ಸೆ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಇಂದು (ಫೆಬ್ರವರಿ 28) ಬೆಳಿಗ್ಗೆ 6.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 83 ವರ್ಷ ವಯಸ್ಸಾಗಿತ್ತು. ಪಟ್ಟಮ್ಮಾಳ್ ವೀರಸ್ವಾಮಿ ಅವರಿಗೆ ಐವರು ಮಕ್ಕಳು, ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು.
[[{"fid":"230864","view_mode":"default","fields":{"format":"default","field_file_image_alt_text[und][0][value]":"Ravichandran Mother ","field_file_image_title_text[und][0][value]":"ರವಿಚಂದ್ರನ್ ತಾಯಿ "},"type":"media","field_deltas":{"2":{"format":"default","field_file_image_alt_text[und][0][value]":"Ravichandran Mother ","field_file_image_title_text[und][0][value]":"ರವಿಚಂದ್ರನ್ ತಾಯಿ "}},"link_text":false,"attributes":{"alt":"Ravichandran Mother ","title":"ರವಿಚಂದ್ರನ್ ತಾಯಿ ","class":"media-element file-default","data-delta":"2"}}]]
ಅನಾರೋಗ್ಯ ಕಾರಣದಿಂದ ಅವರು ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ (Suguna Hospital) ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಬೆಳಗ್ಗೆ 10.30 ರ ವೇಳೆಗೆ ಆಸ್ಪತ್ರೆಯಿಂದ ರಾಜಾಜಿನಗರದ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು ಎಂದು ತಿಳಿದುಬಂದಿದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ರವಿಚಂದ್ರನ್ ತಾಯಿ (Ravichandran Mother) ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Aditi Prabhudeva: ಶಾನೆ ಟಾಪ್ ಆಗಿತ್ತು ಅದಿತಿ ಪ್ರಭುದೇವ ಮೊದಲ ಸ್ಟ್ಯಾಂಡಪ್ ಕಾಮಿಡಿ ಶೋ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.