ಖ್ಯಾತ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

Bank Janardhan Dies: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯನಟ ಬ್ಯಾಂಕ್ ಜನಾರ್ಧನ್ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರೋ ಮಣಿಪಾಲ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

Written by - Yashaswini V | Last Updated : Apr 14, 2025, 08:04 AM IST
  • 2023ರ ಸೆಪ್ಟೆಂಬರ್ 26ರಂದು ಲಘು ಹೃದಯಾಘಾತದಿಂದಾಗಿ ಬ್ಯಾಂಕ್ ಜನಾರ್ಧನ್ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
  • ಆಗ ಅವರಿಗೆ ವೈದ್ಯರು ಸ್ಟಂಟ್ ಅಳವಡಿಸಿದ್ದರು.
  • ಆರ್ಥಿಕ ಸಂಕಷ್ಟದಲ್ಲಿದ್ದ ಬ್ಯಾಂಕ್ ಜನಾರ್ಧನ್ ಗೆ ಟಿವಿ ಆರ್ಟಿಸ್ಟ್ ಗಳು ಕೈ ಹಿಡಿದಿದ್ದರು.
ಖ್ಯಾತ ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

Bank Janardhan Dies: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ವುಡ್ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ 76ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರೋ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.  ಇವರಿಗೆ, ಈ ಮೊದಲೇ ಹಾರ್ಟ್ ಪ್ರಾಬ್ಲಮ್ ಕೂಡ ಇತ್ತು, ಎರಡು ದಿನದಿಂದ ತುಂಬಾ ಕೆಮ್ಮು ಶುರು ಆಗಿತ್ತು. ಲಂಗ್ಸ್ ನಲ್ಲಿ ಸಮಸ್ಯೆ ಇದ್ದ ಕಾರಣ ಎರಡು ದಿನದಿಂದ ಚಿಕಿತ್ಸೆಗೆ ಸ್ಪಂದಿಸದ ಕಾರಣ ಚಿಕಿತ್ಸೆ ಫಲಕಾರಿ ಆಗದೆ ಇಂದು ಬೆಳಗಿನ ಜಾವ  2.30 ರ ಸುಮಾರಿಗೆ ಕೊನಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಜೀ ಕನ್ನಡ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.

Add Zee News as a Preferred Source

ಸದ್ಯ ಬ್ಯಾಂಕ್ ಜನಾರ್ಧನ್ ಅವರ ಮೃತ ದೇಹ ಆಸ್ಪತ್ರೆಯಲ್ಲೇ ಇದ್ದು, ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. 

2023ರ ಸೆಪ್ಟೆಂಬರ್ 26ರಂದು ಲಘು ಹೃದಯಾಘಾತದಿಂದಾಗಿ ಬ್ಯಾಂಕ್ ಜನಾರ್ಧನ್ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ವೈದ್ಯರು ಸ್ಟಂಟ್ ಅಳವಡಿಸಿದ್ದರು. ಆರ್ಥಿಕ ಸಂಕಷ್ಟದಲ್ಲಿದ್ದ ಬ್ಯಾಂಕ್ ಜನಾರ್ಧನ್ ಗೆ ಟಿವಿ ಆರ್ಟಿಸ್ಟ್ ಗಳು ಕೈ ಹಿಡಿದಿದ್ದರು. 

1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್, ಇಲ್ಲಿಯೇ ತಮ್ಮ ವಿದ್ಯಾಭ್ಯಾಸವನ್ನೂ ಪೂರ್ಣಗೊಳಿಸಿದರು. 1985ರಲ್ಲಿ ತೆರೆಕಂಡ 'ಪಿತಾಮಹ' ಚಿತ್ರದ ಮೂಲಕ ನಟನೆ ಆರಂಭಿಸಿದ ಜನಾರ್ದನರವರು 80, 90ರ ದಶಕದ ಮೋಸ್ಟ್ ಡಿಮ್ಯಾಂಡಿಂಗ್ ಹಾಸ್ಯ ಕಲಾವಿದ. ರಂಗಭೂಮಿ ಹಿನ್ನೆಲೆಯಿಂದ ಬಂದ ಬ್ಯಾಂಕ್ ಜನಾರ್ದನ್ ಅವರು ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಕಳೆದ 40 ವರ್ಷಗಳಿಂದ ಕನ್ನಡ ಸಿನಿ ರಸಿಕರನ್ನು ರಂಜಿಸುತ್ತಿದ್ದಾರೆ. 

ಸಿನಿಮಾ ಅಲ್ಲದೆ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿರೋ ನಟ, ಕನ್ನಡದ ಎಲ್ಲಾ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡಿರುವ ಬ್ಯಾಂಕ್ ಜನಾರ್ಧನ್, ಸರಿ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ 'ಶ್', 'ತರ್ಲೆ ನನ್ ಮಗ', ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿರುವ ಬ್ಯಾಂಕ್ ಜನಾರ್ಧನ್ ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿ ಮನೆ ಮಾತಾಗಿದ್ದರು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News