ಚಾಮರಾಜನಗರ: 2021ರ ಕೊರೊನಾ ಸಾಂಕ್ರಾಮಿಕದ 2ನೇ ಅಲೆಯಲ್ಲಿ 36 ಜನರ ಸಾವಿಗೆ ಕಾರಣವಾದ ಚಾಮರಾಜನಗರ ಆಕ್ಸಿಜನ್ ದುರಂತ ಘಟನೆಯು ಶೀಘ್ರವೇ ಸಿನಿಮಾ ಆಗಿ ಮೂಡಿಬರಲಿದೆ. ಈ ಹಿಂದೆ ‘ಬೆಳಕಿನ ನಡೆಗೆ’ ಎಂಬ ಮಕ್ಕಳ ಚಿತ್ರವನ್ನು ನಿರ್ದೇಶಿಸಿದ್ದ ಯುವ ನಿರ್ಮಾಪಕ ಅಜಯ್‌ಕುಮಾರ್, ಈ ದುರಂತ ಘಟನೆಯನ್ನು ಬೆಳ್ಳಿತೆರೆ ಮೇಲೆ ತರಲು ಪ್ರಯತ್ನಿಸಿದ್ದು, ಚಿತ್ರ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಸಂತ್ರಸ್ತರ ಕುಟುಂಬಗಳ ಸಂಕಟದ ಜೊತೆಗೆ ಸರ್ಕಾರ ಮತ್ತು ಅಧಿಕಾರಶಾಹಿಯ ಲೋಪದೋಷಗಳ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ. ಈಗಾಗಲೇ ಚಾಮರಾಜನಗರ ಆಸ್ಪತ್ರೆಯಲ್ಲಿ ಶೇ.70ಕ್ಕೂ ಹೆಚ್ಚು ಚಿತ್ರೀಕರಣ ನಡೆಸಿರುವ ಚಿತ್ರತಂಡ ಸಂತ್ರಸ್ತರ ಕುಟುಂಬಗಳೊಂದಿಗೆ ಸಂವಾದ ನಡೆಸಿದೆ. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್‌ನ ಒಂದು ಭಾಗವನ್ನು ಈ ಕುಟುಂಬಗಳಿಗೆ ಸಹಾಯ ಹಸ್ತವಾಗಿ ನೀಡಲು ಚಿತ್ರತಂಡವು ನಿರ್ಧರಿಸಿದೆ.


ಇದನ್ನೂ ಓದಿ: ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆ ಬಗ್ಗೆ ಕ್ರೇಜಿಸ್ಟಾರ್ ನುಡಿದ ಭವಿಷ್ಯ ಏನು?


ನಿರ್ದೇಶಕ ಅಜಯ್ ಕುಮಾರ್ ಚಿತ್ರಕ್ಕೆ ‘ಲಾಕ್‌ಡೌನ್’ ಎಂಬ ಹೆಸರಿಟ್ಟಿದ್ದಾರೆ. ಆಕ್ಸಿಜನ್ ದುರಂತದ ನಂತರ ಹಲವು ಕುಟುಂಬಗಳು ಛಿದ್ರವಾಗಿವೆ. ತಮ್ಮ ಕುಟುಂಬದ ಆಧಾರ ಸ್ತಂಭಗಳನ್ನು ಕಳೆದುಕೊಂಡಿವೆ. ಹೀಗಾಗಿ ಚಿತ್ರದ ಲಾಭದ ಶೇ.30ರಷ್ಟನ್ನು 36 ಕುಟುಂಬಗಳಿಗೆ ಸಹಾಯ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.


‘ಲಾಕ್‌ಡೌನ್’ ಪ್ರೊಮೋ ಈಗಾಗಲೇ ಎಲ್ಲರನ್ನೂ ಸೆಳೆಯುತ್ತಿದೆ. ಸಮಯಕ್ಕೆ ಸರಿಯಾಗಿ ಆಮ್ಲಜನಕ ಪೂರೈಕೆ ಮಾಡಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ದುರಂತವನ್ನು ವರದಿ ಮಾಡಿದ ಪತ್ರಕರ್ತರನ್ನು ಭೇಟಿ ಮಾಡಿ, ದುರಂತದ ಬಗ್ಗೆ ವಿಭಿನ್ನ ದೃಷ್ಟಿಕೋನಗಳನ್ನು ಕಲೆ ಹಾಕಲು ಯತ್ನಿಸಿರುವುದಾಗಿ ಯುವ ನಿರ್ದೇಶಕ ಅಜಯ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಅತೀ ಶೀಘ್ರದಲ್ಲಿ ಮದುವೆ ಆಗಲಿದ್ದಾರೆ ನಟಿ ಅದಿತಿ ಪ್ರಭುದೇವ್..!


ಅಧಿಕಾರಿಗಳ ನಡುವೆ ಜಟಾಪಟಿ-ಸರ್ಕಾರದ ನಿರ್ಲಕ್ಷ್ಯ: ಚಾಮರಾಜನಗರ ಡಿಸಿ ಆಗಿದ್ದ ಡಾ.ಎಂ.ಆರ್.ರವಿ ಹಾಗೂ ಮೈಸೂರು ಡಿಸಿ ಆಗಿದ್ದ ರೋಹಿಣಿ ಸಿಂಧೂರಿ ದುರಂತದ ತಪ್ಪನ್ನು ಒಬ್ಬರಿಗೊಬ್ಬರ ಮೇಲೆ ಹೊರಿಸಿ ಕೆಸರು ಎರಚಾಡಿಕೊಂಡಿದ್ದರು.‌ ಸರ್ಕಾರದ ನಡೆಗೆ ಕೋರ್ಟ್ ಕೂಡ ಛೀಮಾರಿ ಹಾಕಿ ನ್ಯಾಯಾಂಗ ತನಿಖೆಗೆ ಆದೇಶಿಸಿ ತಂಡ ರಚಿಸಿತ್ತು.‌


ದುರಂತ ನಡೆದು ಒಂದೂವರೆ ವರ್ಷವಾದರೂ ಇನ್ನೂ ಕೂಡ ಸಂತ್ರಸ್ತರಿಗೆ ಪರಿಹಾರ ಸಿಗದಿರುವುದು, ಮೃತರ ಸಂಖ್ಯೆ ಏರುಪೇರು ಮುಂದುವರೆದಿರುವುದು ಮತ್ತೊಂದು ವಿಪರ್ಯಾಸವಾಗಿದೆ. ತೆರೆಮೇಲೆ ಬರಲಿರುವ ಆಮ್ಲಜನಕ ದುರಂತದ ಚಿತ್ರ ಇವೆಲ್ಲದರ ಮೇಲೆ ಬೆಳಕು ಚೆಲ್ಲಲಿದೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.