ಟೀಸರ್ನಲ್ಲೆ ಪ್ರೇಕ್ಷಕರ ಹುಚ್ಚೆಬ್ಬಿಸಿದ ‘ಕರಾವಳಿ’: ಮೈ ಜುಮ್ಮೆನಿಸುವಂತಿದೆ ‘ಪ್ರತಿಷ್ಠೆಯ ಪಿಚಾಚಿ’!
Karavali Teaser: `ಕರಾವಳಿ` ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
Karavali Teaser: 'ಕರಾವಳಿ' ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. 2025ರ ಬಹುನಿರೀಕ್ಷೆಯ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ ಕರಾವಳಿ ಸಿನಿಮಾ ಕೂಡ ಜಾಗ ಗಿಟ್ಟಿಸಿಕೊಂಡಿರುವುದು ವಿಶೇಷ. ಪೋಸ್ಟರ್ಸ್ ಮತ್ತು ಟೀಸರ್ ಮೂಲಕ ಈಗಾಗಲೇ ಕುತೂಹಲ ಹೆಚ್ಚಿಸಿರುವ ಕರಾವಳಿ ಹೊಸ ವರ್ಷದ ಪ್ರಯುಕ್ತ ಮತ್ತೊಂದು ಭರ್ಜರಿ ಟೀಸರ್ ಮೂಲಕ ಸಿನಿಅಭಿಮಾನಿಗಳ ಮುಂದೆ ಬಂದಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್ ಗಾಣಿಗ ನಿರ್ದೇಶನದ ಕರಾವಳಿಯ ವಿಭಿನ್ನವಾದ ಟೀಸರ್ ಆಕರ್ಷಕವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಸಾಮಾನ್ಯವಾಗಿ ಟೀಸರ್ ನಾಯಕ, ನಾಯಕಿ ಅಥವ ಸಿನಿಮಾದ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕೃತವಾಗಿರುತ್ತದೆ. ಆದರೆ ಕರಾವಳಿಯಿಂದ ಬಂದಿರುವ ಹೊಸ ಟೀಸರ್ ಒಂದು ಪ್ರತಿಷ್ಠಿಯ ವಸ್ತುವಿನ ಮೇಲೆ ಇರುವುದು ವಿಶೇಷ. ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಪ್ರತಿಷ್ಠಿಯ ಕುರ್ಚಿ ಹೈಲೆಟ್. ಅದು ಬರಿ ಕುರ್ಚಿಯಲ್ಲ ಪ್ರತಿಷ್ಠಿಯ ಪಿಚಾಚಿ ಎನ್ನುವ ಸಂಭಾಷಣೆಯಿಂದ ಟೀಸರ್ ಪ್ರಾರಂಭವಾಗುತ್ತೆ. ಪ್ರತಿಷ್ಠೆಯ ಕುರ್ಚಿ ಮೇಲೆ ಕೂರುವುದಿರಲಿ ಕಣ್ಣಿಟ್ಟವರನ್ನು ಬಿಡಲ್ಲ ಎಂದು ನಟ ಮಿತ್ರ ಅವರ ಧ್ವನಿಯಲ್ಲಿ ಮೂಡಿ ಬಂದಿರುವ ಈ ಟೀಸರ್ ಮೈ ಜುಮ್ ಎನ್ನುವಂತಿದೆ.
ಅಂದಹಾಗೆ ಕರಾವಳಿ ಕಂಬಳ ಪ್ರಪಂಚದ ಬಗ್ಗೆ ಇರುವ ಸಿನಿಮಾ. ಈ ಮೊದಲು ರಿಲೀಸ್ ಆಗಿರುವ ಟೀಸರ್ ನಲ್ಲಿ ಒಂದು ಮಗು ಜನಿಸುತ್ತದೆ ಅದೇ ಸಮಯಕ್ಕೆ ಕೊಟ್ಟಿಗೆಯಲ್ಲಿ ಒಂದು ಕರುವಿನ ಜನನವು ಆಗುತ್ತೆ. ಸದ್ಯ ರಿಲೀಸ್ ಆಗಿರುವ ಟೀಸರ್ ಮುಂದುವರೆದ ಭಾಗ ಎಂಬಂತೆ ಆ ಮಗು ಹುಟ್ಟಿದಾಗಿನಿಂದ ಪ್ರತಿಷ್ಠಿಯ ಕುರ್ಚಿಯನ್ನು ನೋಡುತ್ತಾ ಬೆಳೆದವನು, ಆ ಕುರ್ಚಿಯ ಮೇಲೆ ಎಲ್ಲರ ಕಣ್ಣು ಬಿದ್ದಿರುವುದು ಈ ಟೀಸರ್ ನಲ್ಲಿ ಗೊತ್ತಾಗುತ್ತಿದೆ. ನಟ ಮಿತ್ರ ಘರ್ಜನೆ ರಮೇಶ್ ಇಂದಿರ ಅವರ ಕ್ರೌರ್ಯತ್ವ ಕೂಡ ಟೀಸರ್ ನಲ್ಲಿ ಕಾಣಬಹುದು. ಕೆಕೆ ಮಠ ಹಾಗೂ ಟೀಸರ್ ನ ಕೊನೆಯಲ್ಲಿ ಒಂದು ಫ್ರೇಮ್‌ನಲ್ಲಿ ಕಾಣಿಸಿಕೊಳ್ಳುವ ಪ್ರಜ್ವಲ್ ದೇವರಾಜ್ ಕೂಡ ತುಂಬಾ ಇಂಟ್ರಸ್ಟಿಂಗ್ ಎನಿಸುತ್ತಿದ್ದಾರೆ.
ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಮೂರು ವಿಭಿನ್ನ ರೀತಿಯ ಲುಕ್ ಈಗಾಗಲೇ ರಿವೀಲ್ ಆಗಿದೆ. ಯಕ್ಷಗಾನ, ಕಂಬಳ, ಮಹಿಷಾಸುರ ಹೀಗೆ 3 ವೆರೈಟಿ ಗೆಟಪ್ ನಲ್ಲಿ ಪ್ರಜ್ವಲ್ ಕಾಣಿಸಿಕೊಂಡಿದ್ದು ಪ್ರಜ್ವಲ್ ಇಲ್ಲಿ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಕೊಡಿಸುವವನಾ? ಡೈನಮಿಕ್ ಪ್ರಿನ್ಸ್ ಪಾತ್ರ ಯಾವುದು ಎನ್ನುವ ಕುತೂಹಲ ಕೂಡ ಮೂಡಿಸಿದೆ.
ಕರಾವಳಿ ಈಗಾಗಲೇ 80ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ.ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ, ಅಭಿಮನ್ಯು ಸದಾನಂದನ್ ಕ್ಯಾಮರಾ ವರ್ಕ್ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.