KCN Mohan: ನವರಂಗ್ ಥಿಯೇಟರ್ ಮಾಲೀಕ, ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ

Sandalwood Producer KCN Mohan Death: ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕರಾಗಿದ್ದ ಕೆಸಿಎನ್ ಮೋಹನ್, ಇತ್ತೀಚೆಗಷ್ಟೇ ಅದನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿದ್ದರು.

Written by - Puttaraj K Alur | Last Updated : Jul 2, 2023, 04:44 PM IST
  • ನವರಂಗ್​ ಥಿಯೇಟರ್ ಮಾಲೀಕ ಮತ್ತು ಖ್ಯಾತ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ
  • ಅನಾರೋಗ್ಯದಿಂದ ಬಳಲುತ್ತಿದ್ದ ಕೆಸಿಎನ್ ಮೋಹನ್‍ರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • ಕೆಸಿಎನ್ ಮೋಹನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
KCN Mohan: ನವರಂಗ್ ಥಿಯೇಟರ್ ಮಾಲೀಕ, ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ title=
ಕೆಸಿಎನ್ ಮೋಹನ್ ನಿಧನ

ಬೆಂಗಳೂರು: ನವರಂಗ್​ ಥಿಯೇಟರ್ ಮಾಲೀಕ, ಖ್ಯಾತ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಗೌಡ್ರು ಅವರ ಕುಟುಂಬದ ಕೆಸಿಎನ್ ಮೋಹನ್ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.   

ಅನಾರೋಗ್ಯದಿಂದ ಬಳಲುತ್ತಿದ್ದ ಕೆಸಿಎನ್ ಮೋಹನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೋಹನ್ ವಿಧಿವಶರಾಗಿದ್ದಾರೆ.

ಇದನ್ನೂ ಓದಿ: ಹಸಿ ಬಿಸಿ ಪಾತ್ರ ಮಾಡೋಕೆ ಮಿಲ್ಕಿ ಬ್ಯೂಟಿ ತಮನ್ನಾ ಪಡೆದ ಸಂಭಾವನೆ ಎಷ್ಟು ಗೊತ್ತಾ..?

ಕೆಸಿಎನ್ ಮೋಹನ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ನವರಂಗ್​, ಊರ್ವಶಿ ಚಿತ್ರಮಂದಿರಗಳ ಮಾಲೀಕರಾಗಿದ್ದ ಅವರು ಪ್ರದರ್ಶಕರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಹೆಸರು ಮಾಡಿದ್ದರು.

ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲೀಕರಾಗಿದ್ದ ಮೋಹನ್, ಇತ್ತೀಚೆಗಷ್ಟೇ ಅದನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡಿದ್ದರು.

ಇದನ್ನೂ ಓದಿ: ವಿಶೇಷ ಚೇತನ ಮಕ್ಕಳಿಯಿಂದ ʼಸ್ಯಾಂಡಲ್ವುಡ್‌ ಗಣಿʼಗೆ ವಿಭಿನ್ನ ಶುಭಾಶಯ..!

ಕಿಡ್ನಿ ವೈಫಲ್ಯದಿಂದ ಕೆಸಿಎನ್ ಮೋಹನ್ ನಿಧನ..?

ಕೆಸಿಎನ್​ ಮೋಹನ್​ ಅವರಿಗೆ ಇತ್ತೀಚೆಗಷ್ಟೇ ಆರೋಗ್ಯ ಕೈ ಕೊಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ​ಅವರು ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News