ಬೆಂಗಳೂರು: ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಇಂದು ಪಾಲಿಕೆ ಕಂದಾಯ ಅಧಿಕಾರಿಗಳು ಈಗ ಮಾಲ್ ಅನ್ನು ಸೀಜ್ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: 15ನೇ ವಯಸ್ಸಿಗೆ ನಾಯಕಿ.. 100ಕ್ಕೂ ಹೆಚ್ಚು ಚಿತ್ರಗಳು.. ಈ ಚೆಲುವೆ ಯಾರೆಂದು ನೆನಪಿದೆಯಾ? 


ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.


ತೆರಿಗೆ ಪಾವತಿ ಬಾಕಿ ಉಳಿಸಿಕೊಂಡ ಆರೋಪದ ಮೇಲೆ ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ. ಸ್ಥಳದಲ್ಲಿ ವಲಯ ಆಯುಕ್ತರಾದ ಶ್ರೀಮತಿ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಯಾ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.


ಇದನ್ನೂ ಓದಿ: ನಟಿ ಅನುಷ್ಕಾ ಶರ್ಮಾ ಪ್ರೆಗ್ನೆನ್ಸಿಯಲ್ಲಿ ಕಾಡ್ತಿದ್ಯಾ ಈ ಸಮಸ್ಯೆ? ಕೊಹ್ಲಿ ಬ್ರೇಕ್‌ ಪಡೆಯಲು ಇದೇನಾ ಅಸಲಿ ಕಾರಣ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.