Hostel Hudugaru Bekagiddare : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ  ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Cricketers acted in films : ಅಭಿನಯದಿಂದ ಮೋಡಿ ಮಾಡಿದ ಭಾರತೀಯ ಕ್ರಿಕೆಟಿಗರು ಇವರೇ


ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಂ. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ ಚಿತ್ರತಂಡ. 


ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ. 


ಇದನ್ನೂ ಓದಿ : Kantara Movie: ಗರುಡಮಾಲ್‌ನಲ್ಲಿ ಕಾಂತಾರ ಸಿನಿಮಾ ನೋಡಿದ ಕೇಂದ್ರ ಸಚಿವೆ


ಯೂತ್ ಸಬ್ಜೆಕ್ಟ್ ಒಳಗೊಂಡ  ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.