ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಬಿಟ್ಟು ಹೋಗಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ದಿವಂಗತ ಸಂಚಾರಿ ವಿಜಯ್(Sanchari Vijay) ಅಭಿನಯದ ಕೊನೆ ಚಿತ್ರ ‘ತಲೆದಂಡ’(Thaledanda Film)ಏಪ್ರಿಲ್ 1ರಂದು ತೆರೆ ಕಾಣುತ್ತಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
‘ನನಗೆ ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಹಿರಿಯ ನಟ ದ್ವಾರಕೀಶ್(Dwarakish) ಸೇರಿದಂತೆ ಕೆಲವು ದಿಗ್ಗಜರ ಜೊತೆ ಕೆಲಸ ಮಾಡಿದ್ದೇನೆ. ಮೈಸೂರು ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕನಾಗಿಯೂ ಕಾರ್ಯ ನಿರ್ವಹಿಸುತ್ತಿದ್ದೇನೆ. ನಾನೇ ಒಂದು ಚಿತ್ರ ನಿರ್ದೇಶಿಸಬೇಕೆಂದು ಮೊದಲಿಂದ ಆಸೆ ಇತ್ತು. ಈಗ ನಿರ್ಮಾಪಕರನ್ನು ಹುಡುಕಿಕೊಂಡು ಹೋಗುವ ವಯಸ್ಸಲ್ಲ ನಂದು. ನನ್ನಾಸೆಯನ್ನರಿತ ನನ್ನ ಹೆಂಡತಿ ಹೇಮಮಾಲಿನಿ ಚಿತ್ರ ನಿರ್ಮಾಣಕ್ಕೆ ಮುಂದಾದರು. ಆ ನಂತರ ಗೆಳೆಯ ಅರುಣ್ ಕುಮಾರ್ ಸಾಥ್ ನೀಡಿದರು. ಕೊರೊನಾ ಸಂಕಷ್ಟಗಳ ನಡುವೆ ನಮ್ಮ ಚಿತ್ರ ಮುಗಿಯಿತು’ ಅಂತಾ ನಿರ್ದೇಶಕ ಪ್ರವೀಣ್ ಕೃಪಾಕರ್(Praveen Krupakar) ಹೇಳಿದರು.
ಇದನ್ನೂ ಓದಿ: ‘ಎದೆಹಾಲು ದಾನ ಮಾಡಿ, ಜೀವಗಳನ್ನು ಉಳಿಸಿ’ ಅಭಿಯಾನದ ಬಗ್ಗೆ ಹೀಗಂದ್ರು ರಾಧಿಕಾ ಪಂಡಿತ್
‘ಅರೆ ಬುದ್ದಿಮಾಂದ್ಯನ ಪಾತ್ರದಲ್ಲಿ ಸಂಚಾರಿ ವಿಜಯ್(Sanchari Vijay) ನಟಿಸಿದ್ದಾರೆ. ಹುಬ್ಬಲ್ಲಿನ ಹುಡುಗನಾಗಿ ಎಲ್ಲರ ಗಮನ ಸೆಳೆಯುತ್ತಾರೆ. ಸಾಯುವ ಮುನ್ನ ನಮ್ಮ ಚಿತ್ರದ ಡಬ್ಬಿಂಗ್ ಸಹ ವಿಜಯ್ ಮುಗಿಸಿದ್ದರು. ಈಗಲೂ ಅವರನ್ನು ನೆನೆದರೆ ನನ್ನ ಬಾಯಲ್ಲಿ ಮಾತು ಬರುವುದಿಲ್ಲ. ನಾಯಕಿಯಾಗಿ ಸಾಕಿ ಪಾತ್ರದಲ್ಲಿ ಚೈತ್ರಾ ಆಚಾರ್, ವಿಜಯ್ ತಾಯಿಯಾಗಿ ಮಂಗಳ(ರಂಗಾಯಣ ರಘು ಮಡದಿ), ತಂದೆಯ ಪಾತ್ರದಲ್ಲಿ ರಮೇಶ್ ಪಂಡಿತ್, MLA ಆಗಿ ಮಂಡ್ಯ ರಮೇಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಬಿ.ಸುರೇಶ್ ಇದ್ದಾರೆ. ನಾವು ಈಗಿನ ಅಧುನಿಕತೆಗಾಗಿ ಯಾವ ರೀತಿ ಪ್ರಕೃತಿ ಹಾಳು ಮಾಡುತ್ತಿದ್ದೇವೆ ಎಂಬುದೇ ಕಥಾಹಂದರ. ಈವರೆಗೂ 5 ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ(International Film Festival)ಗಳಲ್ಲಿ ನಮ್ಮ ಚಿತ್ರ ಪ್ರದರ್ಶನವಾಗಿದೆ. ಭಾಷೆ ಬರದವರು ಸಹ ವಿಜಯ್ ಅಭಿನಯ ಕಂಡು ಬೆರಗಾಗುತ್ತಿದ್ದಾರೆ. ಹಲವು ದೊಡ್ಡ ದೊಡ್ಡ ಚಿತ್ರಗಳ ನಡುವೆ ಏಪ್ರಿಲ್ 1ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಿ ಹರಸಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ನಾಯಕಿ ಚೈತ್ರಾ ಆಚಾರ್, ಮಂಗಳ, ರಮೇಶ್ ಪಂಡಿತ್, ಮಂಡ್ಯ ರಮೇಶ್ ತಮ್ಮ ಪಾತ್ರದ ಬಗ್ಗೆ ಹೇಳುತ್ತಾ ವಿಜಯ್ ಅವರನ್ನು ನೆನೆದು ಭಾವುಕರಾದರು. ನಿರ್ಮಾಪಕಿ ಹೇಮಮಾಲಿನಿ ಕೃಪಾಕರ್, ಸಂಗೀತ ನಿರ್ದೇಶಕ ಹರಿಕಾವ್ಯ ಹಾಗೂ ಸಂಕಲನಕಾರ ಬಿ.ಎಸ್.ಕೆಂಪರಾಜ್ ‘ತಲೆದಂಡ’ದ ಬಗ್ಗೆ ಮಾತನಾಡಿದರು. ಅಶೋಕ್ ಕಶ್ಯಪ್ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ.
ಇದನ್ನೂ ಓದಿ: Natabhayankara: "ನಟ ಭಯಂಕರ" ನಿಗೆ "ಮದಗಜ"ನ ಸಾಥ್.!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.