SK Bhagavan : ಕನ್ನಡದ ಖ್ಯಾತ ನಿರ್ದೇಶಕ ಎಸ್‌.ಕೆ ಭಗವಾನ್‌ ವಿಧಿವಶ

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್‌.ಕೆ ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ 2 ತಿಂಗಳಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 

Written by - Channabasava A Kashinakunti | Last Updated : Feb 20, 2023, 09:09 AM IST
  • ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್‌.ಕೆ ಭಗವಾನ್
  • ಎಸ್‌.ಕೆ ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ನಿಧನ
  • ಮಗಳ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನ
SK Bhagavan : ಕನ್ನಡದ ಖ್ಯಾತ ನಿರ್ದೇಶಕ ಎಸ್‌.ಕೆ ಭಗವಾನ್‌ ವಿಧಿವಶ title=

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಎಸ್‌.ಕೆ ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ 2 ತಿಂಗಳಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 

ಸಹಕಾರ ನಗರದ ಮಗಳ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಡಾ ರಾಜ್ ಕುಮಾರ್ ಅವರ ಬಹುತೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿ ಹಲವು ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಮತ್ತೊಬ್ಬ ಖ್ಯಾತ ನಿರ್ದೇಶಕ ದೊರೈರಾಜ್ ಮತ್ತು ಭಗವಾನ್ ಜೋಡಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದ್ದರು. 

ನಿರ್ದೇಶಕ ಭಗವಾನ್ ಅವರು ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸಯ, ಬಯಲು ದಾರಿ, ಆಪರೇಷನ್ ಡೈಮಂಡ್ ರಾಕೆಟ್, ಗಿರಿಕನ್ಯೆ, ಚಂದನದ ಗೊಂಬೆ, ಮುನಿಯನ ಮಾದರಿ, ಹೊಸಬೆಳಕು, ಬೆಂಕಿಯ ಬಲೆ, ಯಾರಿವನು, ನೀನು ನಕ್ಕರೆ ಹಾಲು ಸಕ್ಕರೆ, ಜೀವನ ಚೈತ್ರ, ಒಡಹುಟ್ಟಿದವರು ಹೀಗೆ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News