Ayodhya Ram Mandir: ಉತ್ತರ ಪ್ರದೇಶದ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಇದೇ ಜನವರಿ 22ರಂದು ಗರ್ಭಗುಡಿಯಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ 4 ಸಾವಿರ ಸಾಧುಗಳು ಹಾಜರಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಬಹಳ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಂದಾಗಿದ್ದು, ಪ್ರಧಾನಿ ಪೂಜೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಆದರೆ ಅದಕ್ಕೂ ಒಂದು ವಾರ ಮುನ್ನ ಪ್ರಾಣ ಪ್ರತಿಷ್ಟಾಪನೆಯ ವಿಧಿ ವಿಧಾನಗಳು ಆರಂಭವಾಗಲಿದೆ.
ಇನ್ನು ಶ್ರೀರಾಮ ಮಂದಿರದ ಮೊದಲ ಮಹಡಿಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ರಾಮನ ಮೂರ್ತಿಯನ್ನು ನೆಲಮಹಡಿಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಆ ನೆಲಮಹಡಿ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ವಿಗ್ರಹ ಪ್ರತಿಷ್ಠಾಪನೆಗೆ ಸರ್ವ ಸನ್ನದ್ಧವಾದಂತಾಗಿದೆ. ಈಗಾಗಲೇ ಮೂರ್ತಿಗಳ ಕೆತ್ತನೆ ಕಾರ್ಯವೂ ಮುಕ್ತಾಯದ ಹಂತ ತಲುಪಿದ್ದು, ಸದ್ಯ 3 ವಿಗ್ರಹಗಳ ಕೆತ್ತನೆ ಕಾರ್ಯದಲ್ಲಿ ಶಿಲ್ಪಿಗಳು ನಿರತರಾಗಿದ್ದಾರೆ.
ಇದನ್ನೂ ಓದಿ: ಪ್ರೀತಿ ಜಿಂಟಾ ಹೆಸರಿನ ವಿವಾದ.. ರಿಯಲ್ ನೇಮ್ ಬಹಿರಂಗಪಡಿಸಿದ ಬಾಲಿವುಡ್ ಬ್ಯೂಟಿ!
ವಾರಾಣಸಿಯ ವೈದಿಕ ಸಂಪ್ರದಾಯದ ವಿದ್ವಾಂಸ, 86 ವರ್ಷದ ಹಿರಿಯ ಪಂಡಿತ್ ಲಕ್ಷ್ಮೀಕಾಂತ ಮಥುರನಾಥ ದೀಕ್ಷಿತ್ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಟಾಪನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಸಿನಿಮಾ ತಾರೆಯರಿಗೂ ಆಹ್ವಾನ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಬಾಲಿವುಡ್, ಟಾಲಿವುಡ್, ಕಾಲಿವುಡ್, ಸ್ಯಾಂಡಲ್‌ವುಡ್, ಮಾಲಿವುಡ್ ತಾರೆಯರು ಈ ಶುಭಕಾರ್ಯಕ್ಕೆ ಸಾಕ್ಷಿ ಆಗಲಿದ್ದಾರೆ.
ಕನ್ನಡ ನಟ, ನಿರ್ದೇಶಕ ರಿಷಬ್ ಶೆಟ್ಟಿ, ತಮಿಳು ನಟರಾದ ರಜನಿಕಾಂತ್, ಧನುಷ್, ತೆಲುಗು ನಟ ಚಿರಂಜೀವಿ, ಮಲಯಾಳಂ ನಟ ಮೋಹನ್ ಲಾಲ್‌ಗೆ ಈಗಾಗಲೇ ಆಹ್ವಾನ ಸಿಕ್ಕಿದೆ ಎನ್ನಲಾಗುತ್ತಿದ್ದು, ಬಾಲಿವುಡ್‌ನಿಂದ ಅಕ್ಷಯ್ ಕುಮಾರ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ನಿರ್ದೇಶಕರಾದ ರಾಜ್‌ಕುಮಾರ್ ಹಿರಾನಿ, ರೋಹಿತ್ ಶೆಟ್ಟಿ ಈ ಲಿಸ್ಟ್‌ನಲ್ಲಿ ಇದ್ದಾರೆ. ಇನ್ನು ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್, ಉದ್ಯಮಿಗಳಾದ ಮುಖೇಶ್ ಅಂಬಾನಿ, ಗೌತಮ್ ಅದಾನಿ, ರತನ್ ಟಾಟಾಗೂ ಆಹ್ವಾನ ಸಿಕ್ಕಿದ್ದು, ಚಿತ್ರರಂಗದಿಂದ ಮತ್ತಷ್ಟು ತಾರೆಯರಿಗೆ ಈ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿ ಆಗುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.