ಸೆಟ್ಟೇರಿತು ’ನಿದ್ರಾದೇವಿ Next Door’: ಪ್ರವೀರ್ ಶೆಟ್ಟಿ-ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ ಕ್ರೇಜಿಸ್ಟಾರ್ ಕ್ಲಾಪ್
Sandalwood Updates: ಯುವ ಪ್ರತಿಭೆ ಸುರಾಗ್ ಸಾಗರ್ ’ನಿದ್ರಾದೇವಿ Next Door’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ
Sandalwood Updates: ಸೈರನ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್’ಗೆ ಎಂಟ್ರಿ ಕೊಟ್ಟಿದ್ದ ಪ್ರವೀರ್ ಶೆಟ್ಟಿ ಈಗ ಮತ್ತೊಂದು ವಿಭಿನ್ನ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಪ್ರವೀರ್ ಶೆಟ್ಟಿಯ ಹೊಸ ಪ್ರಯತ್ನದ ’ನಿದ್ರಾದೇವಿ Next Door’ ಸಾಥ್ ಕೊಟ್ಟರು. ಚಿತ್ರಕ್ಕೆ ಕ್ಲಾಪ್ ಮಾಡಿದ ಕನಸುಗಾರ ಇಡೀ ತಂಡಕ್ಕೆ ಶುಭ ಹಾರೈಸಿದರು.
ಯುವ ಪ್ರತಿಭೆ ಸುರಾಗ್ ಸಾಗರ್ ’ನಿದ್ರಾದೇವಿ Next Door’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ರಿಷಿಕಾ ನಾಯಕ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
ಇದನ್ನೂ ಓದಿ: "ಅವರ ಜೊತೆ ಮಲಗಲು ಒಪ್ಪುತ್ತಿಲ್ಲ ಅಂತ ಗದರಿಸಿದ್ರು.." ಕೆಜಿಎಫ್ ನಟಿ ಸೆನ್ಸೇಷನಲ್ ಕಾಮೆಂಟ್!
ಮುಹೂರ್ತ ಸಮಾರಂಭದ ಬಳಿಕ ಮಾತನಾಡಿದ ನಿರ್ದೇಶಕ ಸುರಾಗ್ ಸಾಗರ್, “ರವಿಚಂದ್ರನ್ ಅವರು ನಮ್ಮ ಸಿನಿಮಾಗೆ ಕ್ಲಾಪ್ ಮಾಡಿದ್ದು ಖುಷಿ ಕೊಟ್ಟಿದೆ. ಅವರು ವಿಭಿನ್ನ ಟೈಟಲ್ ಮೂಲಕ ಬರ್ತಾರೆ. ನಮ್ಮ ಟೈಟಲ್ ಕೂಡ ವಿಭಿನ್ನವಾಗಿದೆ. ಇದು ಕಾಕತಾಳೀಯ. ಇಬ್ಬರು ನಿದ್ದೆ ಇಲ್ಲವದರ ಜರ್ನಿ. ಅವ್ರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು. ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ. ಇದಕ್ಕೆಲ್ಲಾ ಸಿನಿಮಾ ನೋಡಬೇಕು” ಎಂದರು.
ನಿರ್ಮಾಪಕ ಜಯರಾಮ್ ದೇವಸಮುದ್ರ ಮಾತನಾಡಿ, “ಪ್ರವೀಣ್ ಶೆಟ್ಟಿ ಅವರಿಗೋಸ್ಕರ್ ಈ ಪ್ರಾಜೆಕ್ಟ್’ಗೆ ಹಣ ಹಾಕುತ್ತಿದ್ದೇನೆ. ಕಥೆ ಬಹಳ ಚೆನ್ನಾಗಿದೆ. ನನಗೆ ಸುರಾಗ್ ಕಥೆ ಹೇಳಿದಾಗ ಫಸ್ಟ್ ಇಂಪ್ರೆಷನ್’ನಲ್ಲಿಯೇ ಇಷ್ಟವಾಯ್ತು. ಪ್ರತಿಯೊಬ್ಬರು ಲೈಫ್’ನಲ್ಲಿ ನಡೆಯುವ ಕೆಲ ಘಟನೆಗಳು ಜೀವನದಲ್ಲಿವೆ. ಕಾಮಿಡಿ ಜೊತೆಗೆ ಒಂದು ಸಂದೇಶ ಚಿತ್ರದಲ್ಲಿದೆ” ಎಂದು ತಿಳಿಸಿದರು.
ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ, ನಿದ್ರೆ ಬರದಿರುವ ಹುಡುಗ ಏನೇನೂ ಕಷ್ಟಪಡುತ್ತಾನೆ. ಅದರ ಸುತ್ತ ನನ್ನ ಪಾತ್ರ ಸಾಗುತ್ತದೆ. ನನ್ನದು ಇಂಟ್ರೆಸ್ಟಿಂಗ್ ಪಾತ್ರ. ಈ ಹಿಂದಿನ ಚಿತ್ರಗಳಿಗೆ ಹೋಲಿಕೆ ಮಾಡಿದರೆ ಇದು ವಿಭಿನ್ನ ಪಾತ್ರ. ಕಳೆದೊಂದು ತಿಂಗಳಿನಿಂದ ರಿಹರ್ಸಲ್ ಮಾಡುತ್ತಿದ್ದೇವೆ ಎಂದರು.
ನಾಯಕಿ ರಿಷಿಕಾ ನಾಯಕ್ ಮಾತನಾಡಿ, ಎರಡು ವರ್ಷದ ಹಿಂದೆಯೇ ನನಗೆ ನಿರ್ದೇಶಕರು ಸಿನಿಮಾದ ಕಥೆ ಹೇಳಿದ್ದರು. ಆಗ ಕ್ಯಾರಕ್ಟರ್ ಬೇರೆ ಇತ್ತು. ಈಗ ಕ್ಯಾರೆಕ್ಟರ್ ಬೇರೆ ಇದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು.
ಯುರೋಪ್’ನ ಪ್ರೇಗ್ ಫಿಲ್ಮ್ ಸ್ಕೂಲ್’ನಲ್ಲಿ ನಿರ್ದೇಶಕ ಪಟು ಕಲಿತಿರುವ ಸುರಾಗ್ ಸಾಗರ್ ಎಂಟ್ರೋಪಿ ಕಿರುಚಿತ್ರದ ಮೂಲಕ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇದೀಗ ಸುರಾಗ್ ’ನಿದ್ರಾದೇವಿ Next Door’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿ ಇದ್ದಾರೆ.
ಇದನ್ನೂ ಓದಿ: ಸಿನಿಮಾಗಳೆಲ್ಲ ಫ್ಲಾಪ್.. ಆದರೂ ನಿಮಿಷಕ್ಕೆ 1 ಕೋಟಿ ಸಂಭಾವನೆ.. ಸ್ಟಾರ್ ಕ್ರಿಕೆಟರ್ ಜೊತೆ ಅಫೇರ್ ಹೊಂದಿದ್ದ ಖ್ಯಾತ ನಟಿ ಈಕೆ!
ರಾಜು ಬೋನಗಾನಿ ಅವರ ರೋಡಿಯಂ ಎಂಟರ್ಟೈನ್ಮೆಂಟ್ ಸಹಯೋಗದೊಂದಿಗೆ ಸೂರಂ ಮೂವೀಸ್ ಬ್ಯಾನರ್ನಡಿಯಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ ಮತ್ತು ನಕುಲ್ ಅಭ್ಯಂಕರ್ ಅವರ ಸಂಗೀತವಿದೆ. ಈ ತಿಂಗಳಾತ್ಯಂತಕ್ಕೆ ’ನಿದ್ರಾದೇವಿ Next Door’ ತಂಡ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.