Kantara Imitation : ದಿ ಡಿವೈನ್‌ ಬ್ಲಾಕ್ಬಸ್ಟರ್‌ ಸಿನಿಮಾ ಕಾಂತಾರ ದೇಶಾದ್ಯಂತ ಸಿನಿ ರಸಿಕರಿಂದ ಅದ್ಬುತ ಪ್ರತಿಕ್ರಿಯೆ ಕನ್ನಡಿಗನ ಚಿತ್ರ. ಇತ್ತೀಚಿಗೆ ಕಾಂತಾರ ಸಿನಿಮಾದಲ್ಲಿ ತೋರಿಸಲಾದ ದೈವದ ಕುರಿತು ಅವಹೇಳನಕಾರಿ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗುತ್ತಿದೆ. ರಿಷಬ್‌ ಶೆಟ್ಟಿ ನಟನೆಯನ್ನು ಅನುಕರಣೆ ಮಾಡಿ ದೈವವನ್ನು ಅವಹೇಳನ ಮಾಡಲಾಗುತ್ತಿದೆ. ಇದೀಗ ಸಂತಾಕ್ಲಾಸ್‌ ವೇಷಧಾರಿ ಒಬ್ಬ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ ಅನುಕರಣೆ ಮಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.


COMMERCIAL BREAK
SCROLL TO CONTINUE READING

ಹೊಂಬಾಳೆ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ ಕಾಂತಾರ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾವನ್ನು ರಿಷಬ್‌ ಶೆಟ್ಟಿ ನಿರ್ದೇಶಿಸಿ ನಟಿಸಿದ್ದಾರೆ. 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಸಿನಿಮಾ ಇದುವರೆಗೂ ಸುಮಾರು 500 ಕೋಟಿ ರೂ. ಲಾಭ ಗಳಿಸಿದೆ. ಅಲ್ಲದೆ, ಭಾರತೀಯ ಚಿತ್ರರಂಗದಲ್ಲಿ ಕೆಲವೊಂದಿಷ್ಟು ಅಪರೂಪದ ದಾಖಲೆಗಳ ಸೃಷ್ಟಿಗೆ ಈ ಸಿನಿಮಾ ಕಾರಣವಾಗಿದೆ. ಇನ್ನು ಸಿನಿಮಾದಲ್ಲಿ ತೋರಿಸಲಾಗಿರುವ ಪರ್ಜುಲಿ, ಗುಳಿದ ದೈವಾರಾಧನೆಯ ದೃಶ್ಯಗಳನ್ನು ಅನುಕರಣೆ ಮಾಡಬೇಡಿ ಅಂತ ಚಿತ್ರತಂಡ ಹಾಗೂ ರಿಷಬ್‌ ಶೆಟ್ಟಿ ಕೇಳಿಕೊಂಡರೂ ಸಹ ಕೆಲ ಜನರು ಕಿವಿಗೆ ಹಾಕಿಕೊಳ್ಳುತ್ತಿಲ್ಲ.


ಇದನ್ನೂ ಓದಿ: BBK 9 : ಯಾರಾಗಬಹುದು ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್‌!?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.