Sanathan Ayodhya Ka Ram song : ಜನವರಿ 22 ಅಂದ್ರೆ ನಾಳೆ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಮತ್ತು ದೇಗುಲ ಉದ್ಘಾಟನೆ ಜರುಗಲಿದೆ. ಈ ಶುಭ ಸಂದರ್ಭದಲ್ಲಿ ಸರಿಗಮಪ ಖ್ಯಾತಿಯ ಮೈಸೂರಿನ ತನುಶ್ರೀ ಆರ್ "ಸನಾತನ ಅಯೋಧ್ಯಾ ಕಾ ರಾಮ್" ಎಂಬ ಹಾಡನ್ನು ಹಾಡಿದ್ದು, ಅವರೆ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಮ್ಯೂಸಿಕ್ ಸಂಸ್ಥೆ ಲಹರಿ ಲೋಕಾರ್ಪಣೆಗೊಳಿಸಿದೆ.
ಹೌದು.. ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಟಾಪನೆ ಆಗುತ್ತಿರುವ ಈ ಶುಭ ಸಂದರ್ಭದಲ್ಲಿ ಮೈಸೂರಿನ ತನುಶ್ರೀ ತಾವೇ ಸಂಗೀತ ನೀಡಿ, ಹಾಡಿರುವ ಈ ಹಾಡು ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಲಹರಿ ಮ್ಯೂಸಿಕ್ ಮೂಲಕ ಈವರೆಗೂ ಲಕ್ಷಾಂತರ ಹಾಡುಗಳನ್ನು ಬಿಡುಗಡೆ ಮಾಡಿದ್ದೇವೆ. ಆದರೆ ಕೇಳಿದ ತಕ್ಷಣ ಮೈರೋಮಾಂಚನವಾಗುವ ಈ ರಾಮನ ಹಾಡನ್ನು ಬಿಡುಗಡೆ ಮಾಡುತ್ತಿರುವುದು ನನಗೆ ನಿಜಕ್ಕೂ ಬಹಳ ಖುಷಿಯಾಗಿದೆ. ಹಾಡು ಕೇಳಿದ ನನ್ನ ಅನೇಕ ಸ್ನೇಹಿತರು ತುಂಬಾ ಚೆನ್ನಾಗಿದೆ ಎಂದು ತಿಳಿಸುತ್ತಿದ್ದಾರೆ. ತನುಶ್ರೀ ಅವರಿಗೆ ಮುಂದೆ ಸಂಗೀತ ಕ್ಷೇತ್ರದಲ್ಲಿ ಒಳ್ಳೆಯ ಭವಿಷ್ಯವಿದೆ ಎಂದು ಲಹರಿ ವೇಲು ಹಾರೈಸಿದರು.
ಇದನ್ನೂ ಓದಿ:ನಟಿ, ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಡಾಕ್ಟರೇಟ್ ಗೌರವ..! ಫೋಟೋಸ್ ಇಲ್ಲಿವೆ
ಕೇವಲ ಅರ್ಧ ಗಂಟೆಯಲ್ಲಿ ಸಿದ್ದವಾದ ಹಾಡಿದ್ದು ಎಂದು ಮಾತು ಆರಂಭಿಸಿದ ಗಾಯಕಿ ತನುಶ್ರೀ, ನನಗೆ ಸಂಗೀತದಲ್ಲಿ ಆಸಕ್ತಿ ಬರಲು ನಮ್ಮ ತಾಯಿ ಪ್ರಸಿದ್ದ ಜನಪದ ಗಾಯಕಿ ಶುಭ ರಾಘವೇಂದ್ರ ಅವರು ಕಾರಣ. ಇನ್ನು ಶ್ರೀರಾಮನ ಕುರಿತಾದ "ಸನಾತನ ಅಯೋಧ್ಯಾ ಕಾ ರಾಮ್" ಹಾಡನ್ನು ಹಿಂದಿಯಲ್ಲಿ ಹಾಡಿದ್ದೇನೆ. ನಾನೇ ಸ್ವರ ಸಂಯೋಜನೆ ಮಾಡಿದ್ದೇನೆ. ನನ್ನ ತಂದೆ ಡಿ.ಎನ್ ರಾಘವೇಂದ್ರ ಸಾಹಿತ್ಯ ಬರೆದಿದ್ದಾರೆ.
ನಿರ್ಮಾಣ ಹಾಗೂ ನಿರ್ದೇಶನವನ್ನು ನನ್ನ ತಂದೆಯವರೆ ಮಾಡಿದ್ದಾರೆ. ಏಸೆನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಪೂಜಾ ಹಾಗೂ ಮನೋಜ್ ಅವರು ಈ ಹಾಡನ್ನು ಪ್ರಸ್ತುತ ಪಡಿಸಿದ್ದಾರೆ. ಸದ್ಯದಲ್ಲೇ ಕನ್ನಡ ಸೇರಿದಂತೆ ಹತ್ತು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಗೀತೆಯಾಗಿ ಈ ಹಾಡು ಬರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:'ಕ್ಯಾಪ್ಟನ್ ಮಿಲ್ಲರ್ʼ ಸ್ಟೋರಿ ಸ್ವಂತದ್ದು ಅಲ್ವ..! ಕಾದಂಬರಿಯಿಂದ ಕದ್ದ ಕಥೆಯಂತೆ
ಈಗಾಗಲೇ ನನ್ನ ಮಗಳು ಸರಿಗಮಪ ಮೂಲಕ ಎಲ್ಲರಿಗೂ ಪರಿಚಿತಳಾಗಿದ್ದಾಳೆ. ಅನೇಕ ಟ್ರ್ಯಾಕ್ ಗಳನ್ನು ಹಾಡಿದ್ದಾಳೆ. ಭಗವಾನ್ ಶ್ರೀರಾಮನ ಕುರಿತಾದ ಈ ಹಾಡನ್ನು ನಾನು ಬರೆದಿದ್ದೇನೆ. ತನುಶ್ರೀ ಈ ಹಾಡನ್ನು ಸುಶ್ರಾವ್ಯವಾಗಿ ಹಾಡುವುದರ ಜೊತೆಗೆ ಮೊದಲ ಬಾರಿಗೆ ಸ್ವರ ಸಂಯೋಜನೆಯನ್ನು ಮಾಡಿದ್ದಾಳೆ. ಹಾಡು ಬರೆಯುವುದರೊಂದಿಗೆ ನಿರ್ದೇಶನ ಹಾಗೂ ನಿರ್ಮಾಣವನ್ನು ತಾವೇ ಮಾಡಿರುವುದಾಗಿ ತನುಶ್ರೀ ತಂದೆ ಡಿ.ಎನ್ ರಾಘವೇಂದ್ರ ತಿಳಿಸಿದರು. ಏಸೆನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನ ಪೂಜಾ ಮತ್ತು ಮನೋಜ್ ಕೂಡ ರಾಮನ ಹಾಡಿನ ಬಗ್ಗೆ ಮಾತನಾಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.