ಬೆಂಗಳೂರು : ಬಹು ನಿರೀಕ್ಷಿತ ಹಾಸ್ಯ ಚಿತ್ರ "ಪೌಡರ್" ತನ್ನ ಎರಡನೇ ಗೀತೆಯಾದ "ಪರಪಂಚ ಘಮ ಘಮ" ಅನ್ನು ಹಾಡನ್ನು ಬಿಡುಗಡೆ ಮಾಡಿದೆ. ಮೊದಲನೇ ಗೀತೆಯಾದ"ಮಿಷನ್ ಘಮ ಘಮ" ತನ್ನ ವಿಭಿನ್ನ ಟ್ಯೂನ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ "ಪರಪಂಚ ಘಮ ಘಮ" ಮೂಲಕ ಅದೇ ರೀತಿಯ ಛಾಪನ್ನು ಮೂಡಿಸಲು ಸಜ್ಜಾಗಿದೆ. 


COMMERCIAL BREAK
SCROLL TO CONTINUE READING

ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ "ಟಗರು ಬಂತು ಟಗರು", "ಸೂರಿ ಅಣ್ಣಾ" ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿದ್ದಾರೆ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ "ಪೌಡರ್" ಚಿತ್ರದ ಈ ಲಯ ಪ್ರಧಾನ ಗೀತೆ ಹಾಡಿದ್ದಾರೆ. ಗೆ 


ಇದನ್ನೂ ಓದಿ : ಯುವ ಪಡೆ ಹೃದಯವನ್ನ ತಲ್ಲಣಗೊಳಿಸುತ್ತಿದೆ ತಮನ್ನಾ ಸೊಗಸು..! ಫೋಟೋಸ್‌ ಇಲ್ಲಿವೆ


ಪೌಡರ್" ಒಂದು ಹಾಸ್ಯಭರಿತ ಚಿತ್ರವಾಗಿದೆ.ಇಬ್ಬರು ಯುವಕರು ಒಂದು ನಿಗೂಢವಾದ "ಪೌಡರ್" ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ "ಪೌಡರ್". ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? "ಪೌಡರ್" ಹಿಂದಿನ "ಪವರ್" ಅವರಿಗೆ ತಿಳಿಯುವುದೇ? ಇದುವೇ ಕಥೆಯ ಸಾರಾಂಶ.


ಜನಾರ್ದನ್ ಚಿಕ್ಕಣ್ಣ ನಿರ್ದೇಶನದ "ಪೌಡರ್" ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. ಈ ಚಿತ್ರವು ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.


ಇದನ್ನೂ ಓದಿ : KRG Studios ಇತಿಹಾಸದಲ್ಲಿ ಮೈಲಿಗಲ್ಲು: ವಿಶೇಷ ಸಹಯೋಗಕ್ಕೆ ಮುಂದಾದ ʼಪೌಡರ್ʼ ಮತ್ತು ʼ1522- ದಿ‌ ಪಬ್ʼ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews