ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಆರ್.ಎನ್.ಸುದರ್ಶನ್ ತಮ್ಮ 78 ನೇ ವಯಸ್ಸಿನಲ್ಲಿ ಇಂದು ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.  


COMMERCIAL BREAK
SCROLL TO CONTINUE READING

ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಸುದರ್ಶನ್ ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ  "ಅಗ್ನಿ ಸಾಕ್ಷಿ" ಧಾರಾವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿರ್ವಹಿಸುತ್ತಿದ್ದರು.